New Ration Card Apply: ನಮಸ್ಕಾರ ಎಲ್ಲರಿಗೂ ನೀವೇನಾದರೂ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಬಯಸುತ್ತಿದ್ದೀರಾ? ಹಾಗಿದ್ದರೆ ಈ ಲೇಖನವನ್ನು ಕೊನೆಯವರೆಗೂ ಓದಿ, ನಿಮಗಾಗಿ ಈ ಲೇಖನ. ಯಾಕೆಂದರೆ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಯಾವೆಲ್ಲಾ ದಾಖಲೆಗಳು ಬೇಕಾಗುತ್ತವೆ? ಮತ್ತು ಯಾವ ದಿನಾಂಕದಂದು ಅರ್ಜಿ ಸಲ್ಲಿಸಬಹುದು? ಎಂಬ ಮಾಹಿತಿಯನ್ನು ನೀಡಿರುತ್ತೇನೆ ಲೇಖನವನ್ನು ಕೊನೆಯವರೆಗೂ ಓದಿ.
ಸ್ನೇಹಿತರೆ ನೀವೇನಾದರೂ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಬಯಸುತ್ತಿದ್ದೀರಾ? ಯಾವ ರೀತಿಯಾಗಿ ಅರ್ಜಿ ಸಲ್ಲಿಸಬೇಕು ಎಂದು ಗೊಂದಲದಲ್ಲಿ ಇದ್ದೀರಾ? ಹಾಗಿದ್ದರೆ ಈ ಲೇಖನದಲ್ಲಿ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ಸಿಗಲಿದೆ.
ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಕೆ ಯಾವಾಗ ಆರಂಭ?
ಹೊಸ ರೇಷನ್ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ರೀತಿಯ ದಿನಾಂಕವನ್ನು ಘೋಷಿಸಲಾಗಿಲ್ಲ. ಆದರೆ ಯಾವ ದಿನದಂದು ಬಿಡುತ್ತಾರೋ ಇನ್ನೂ ಖಚಿತ ಇಲ್ಲ. ಹಾಗಾಗಿ ಗ್ರಾಹಕರು ತಮ್ಮ ಎಲ್ಲಾ ದಾಖಲೆಗಳನ್ನು ಸರಿಪಡಿಸಿ ಇಟ್ಟುಕೊಂಡು ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಿದ ತಕ್ಷಣ ಹೊಸ ರೇಷನ್ ಕಾರ್ಡ್ ಗಳಿಗೆ ನೀವು ಅರ್ಜಿ ಸಲ್ಲಿಸಬಹುದಾಗಿದೆ.
ಸ್ನೇಹಿತರೆ, ರೇಷನ್ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಸಲು ಮತ್ತು ತಿದ್ದುಪಡಿ ಮಾಡಿಸಲು ಕೆಲವು ದಿನಗಳ ಹಿಂದೆ ಅವಕಾಶ ಕಲ್ಪಿಸಿಕೊಡಲಾಗಿತ್ತು. ನಂತರ ಲೋಕಸಭಾ ಚುನಾವಣೆಯ ಫಲಿತಾಂಶ ಅಂದರೆ ಜೂನ್ 4ನೇ ತಾರೀಖಿನ ನಂತರ ಹೊಸ ರೇಷನ್ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಸಲು ಮತ್ತು ತಿದ್ದುಪಡಿ ಮಾಡಿಸಲು ಅವಕಾಶ ಕಲ್ಪಿಸಿಕೊಡಲಾಗುವುದು ಎಂಬ ನಿರೀಕ್ಷೆ ಇದೆ.
ಹಾಗಾಗಿ ರೇಷನ್ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಗ್ರಾಹಕರು ಯಾವುದೇ ರೀತಿಯ ಸುಳ್ಳು ಸುದ್ದಿಗಳಿಗೆ ಕಿವಿ ಕೊಡದೆ ಇರಿ. ಹಾಗಾಗಿ ರೇಷನ್ ಕಾರ್ಡ್ಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಗಳು ತಾಳ್ಮೆಯಿಂದ ಕಾಯಬೇಕಾಗುತ್ತದೆ. ಹೊಸ ರೇಷನ್ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಕೆ ಆರಂಭವಾದ ತಕ್ಷಣ ನಿಮಗೆ ತಿಳಿಸಲಾಗುವುದು.
ಹೊಸ ರೇಷನ್ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು?
- ಕುಟುಂಬದ ಮುಖ್ಯಸ್ಥರ ಆಧಾರ್ ಕಾರ್ಡ್.
- ಮೊಬೈಲ್ ನಂಬರ್.
- ಕುಟುಂಬದ ಎಲ್ಲಾ ಸದಸ್ಯರ ಆಧಾರ್ ಕಾರ್ಡ್.
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ.
- ಬಯೋಮೆಟ್ರಿಕ್ ಕೂಡ ಮಾಡಿಸಲಾಗುವುದು.
ಈ ಎಲ್ಲ ಮೇಲಿನ ದಾಖಲೆಗಳನ್ನು ನೀವು ಸರಿಪಡಿಸಿ ಇಟ್ಟುಕೊಂಡಿರಿ. ನೀವು ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಿದ ತಕ್ಷಣ ನಿಮಗೆ ನಾವು ತಿಳಿಸುತ್ತೇವೆ. ನಂತರ ನೀವು ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ ಗೆ ಹೋಗಿ ಅರ್ಜಿಯನ್ನು ಸಲ್ಲಿಸಬಹುದು.