RRC SER Recruitments 2024: ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನದ ಮೂಲಕ ಕರ್ನಾಟಕದ ಸಮಸ್ತ ಜನತೆಗೆ ತಿಳಿಸುವ ವಿಷಯವೇನೆಂದರೆ, ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಆರಂಭವಾಗಿದ್ದು ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಅಭ್ಯರ್ಥಿಗಳು ಮತ್ತು ಅರ್ಹತೆಯುಳ್ಳ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಇದರ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ನೀಡಿರುತ್ತೇನೆ. ಲೇಖನವನ್ನು ಕೊನೆಯವರೆಗೂ ಓದಿ.
ಸ್ನೇಹಿತರೆ, ಆಗ್ನೇಯ ರೈಲ್ವೆಯ ರೈಲ್ವೆ ನೇಮಕಾತಿ ಸೆಲ್, ಭಾರತದ ಅತ್ಯಂತ ಎಲ್ಲಾ ಕಡೆ ಲೋಕೋ ಪೈಲೆಟ್ ಹಾಗೂ ಟ್ರೈನ್ ಮ್ಯಾನೇಜರ್ ಸೇರಿದಂತೆ 1202 ಹುದ್ದೆಗಳು ಭರ್ತಿ ಮಾಡಿಕೊಳ್ಳುತ್ತಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆ ದಿನಾಂಕದೊಳಗೆ ಅರ್ತಿ ಸಲ್ಲಿಸಬೇಕು.
ಖಾಲಿ ಇರುವ ಹುದ್ದೆಗಳ ಬಗ್ಗೆ ಇನ್ನಷ್ಟು ವಿವರ!
ಸಂಸ್ಥೆ: ಆಗ್ನೇಯ ರೈಲ್ವೆಯ ರೈಲ್ವೆ ನೇಮಕಾತಿ ಸೆಲ್.
ಖಾಲಿ ಇರುವ ಒಟ್ಟು ಹುದ್ದೆಗಳು: 1202 ಹುದ್ದೆಗಳು.
ಸಹಾಯಕ ಲೋಕೋ ಪೈಲೆಟ್ ಖಾಲಿ ಹುದ್ದೆಗಳು: 827 ಹುದ್ದೆಗಳು ಖಾಲಿ ಇವೆ.
ಟ್ರೈನ್ ಮ್ಯಾನೇಜರ್: 375 ಹುದ್ದೆಗಳು.
ವಿದ್ಯಾರ್ಹತೆ ಏನಿರಬೇಕು?
ಆಗ್ನೇಯ ರೈಲ್ವೆಯ ರೈಲ್ವೆ ನೇಮಕಾತಿ ಸೆಲ್ ಹೊರಡಿಸಿರುವ ಅಧಿಸೂಚನೆಯ ಪ್ರಕಾರ ಲೋಕೋ ಪೈಲೆಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು 10ನೇ ತರಗತಿ ಪೂರ್ಣಗೊಳಿಸಿರಬೇಕು. ಹಾಗೂ ಮಾನ್ಯತೆ ಪಡೆದ ಐಟಿಐ ಪ್ರಮಾಣ ಪತ್ರವನ್ನು ಕೂಡ ಹೊಂದಿರಬೇಕು.
ಟ್ರೈನ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ತತ್ಸಮಾನ ವಿದ್ಯಾರ್ಹತೆಯನ್ನು ಮುಗಿಸಿರಬೇಕು ಎಂದು ತಿಳಿಸಲಾಗಿದೆ.
ವಯೋಮಿತಿ
ರೈಲ್ವೆ ಇಲಾಖೆಗೆ ಹೊರಡಿಸಿರುವ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಯ ವಯಸ್ಸು 18 ವರ್ಷಕ್ಕಿಂತ ಮೇಲ್ಪಟ್ಟಿರಬೇಕು ಮತ್ತು 42 ವರ್ಷಕ್ಕಿಂತ ಕಡಿಮೆ ಇರಬೇಕು ಎಂದು ತಿಳಿಸಲಾಗಿದೆ.
ಅರ್ಜಿ ಶುಲ್ಕ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ.
ಅರ್ಜಿ ಸಲ್ಲಿಸುವ ವಿಧಾನ
ಮೊದಲು ಈ ಕೆಳಗಿನ ಜಾಲತಾಣವನ್ನು ಭೇಟಿ ನೀಡಿ ಅದರಲ್ಲಿ ನೀವು ಮೊದಲು ರಿಜಿಸ್ಟರ್ ಮಾಡಿಕೊಳ್ಳಿ.
ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್
ನಿಮ್ಮ ಹೆಸರು ಜನ್ಮ ದಿನಾಂಕ ಹಾಗೂ ಇನ್ನಿತರ ನಿಮ್ಮ ದಾಖಲೆಗಳನ್ನು ನೀಡುವ ಮೂಲಕ ನಿಮ್ಮ ವಿವರಗಳನ್ನು ಅಲ್ಲಿ ನಮೂದಿಸಿ.
ನಂತರ ನಿಮ್ಮ ವಿವರಗಳು ಹಾಗೂ ಉದ್ಯೋಗದ ವಿವರಗಳನ್ನು ಸಂಪೂರ್ಣವಾಗಿ ನಮೂದಿಸಿ ಮುಂದುವರೆಯಿರಿ.
ಕೊನೆಯಲ್ಲಿ ಅರ್ಜಿ ಸಲ್ಲಿಸಿದ ಪ್ರಿಂಟ್ ಔಟ್ ಅನ್ನು ತೆಗೆದುಕೊಳ್ಳಿ.
ಪ್ರಮುಖ ದಿನಾಂಕಗಳು:
- ಅರ್ಜಿ ಸಲ್ಲಿಕೆ ಪ್ರಾರಂಭದ ದಿನಾಂಕ: 13/05/2024
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 12/06/2024
ನೀವು ಮೇಲೆ ನೀಡಿರುವ ಎಲ್ಲಾ ಮಾಹಿತಿಯನ್ನು ಸಂಪೂರ್ಣವಾಗಿ ಓದುವ ಮೂಲಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ನೀವು ಉದ್ಯೋಗವನ್ನು ಪಡೆದುಕೊಳ್ಳುವ ಸಾಧ್ಯತೆ ಇದೆ.
Also Read This: ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ ಯಾವಾಗ ? ಇಂಥಹ ಅಭ್ಯರ್ಥಿಗಳು ಅರ್ಜಿ ಸಲ್ಲಿಕೆ ಮಾಡಬಹುದು.