Free Bus Pass: KSRTC ಉಚಿತ ಬಸ್ ಪಾಸ್ ಪಡೆದುಕೊಳ್ಳಲು ಆನ್ಲೈನ್ ನಲ್ಲಿ ಅರ್ಜಿ ಆಹ್ವಾನ! Free Bus Pass 2024-25

Free Bus Pass

Free Bus Pass: KSRTC ಇಂದ ವಿದ್ಯಾರ್ಥಿಗಳಿಗೆ ಬಸ್ ಪಾಸ್(Bus Pass)ನೀಡಲು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಆಗುವ ಅನಿಸಲಾಗಿದೆ. ಅವಶ್ಯಕತೆ ಇರುವ ವಿದ್ಯಾರ್ಥಿ(Students)ಗಳು ಬಸ್ ಪಾಸ್ ಅನ್ನು ಪಡೆದುಕೊಳ್ಳಲು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನವನ್ನು ತಿಳಿಸಿಕೊಟ್ಟಿರುತ್ತೇನೆ ಲೇಖನವನ್ನು ಕೊನೆಯವರೆಗೂ ಓದಿ. ಬಸ್ ಪಾಸ್ ಗೆ ಅರ್ಜಿ ಸಲ್ಲಿಸುವ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿರುತ್ತದೆ.

ಸ್ನೇಹಿತರೆ 2024-25 ನೇ ಸಾಲಿನ ಶಾಲಾ ಕಾಲೇಜುಗಳು ಈಗಾಗಲೇ ಆರಂಭವಾಗಿದೆ. ವಿದ್ಯಾರ್ಥಿಗಳು ಶಾಲಾ ಕಾಲೇಜುಗಳಿಗೆ ದಿನನಿತ್ಯವೂ ಕೂಡ ಓಡಾಡಲು ಕರ್ನಾಟಕ ರಸ್ತೆ ಸಾರಿಗೆ ಇಲಾಖೆ ವತಿಯಿಂದ ವಿದ್ಯಾರ್ಥಿಗಳಿಗೆ ಅತ್ಯಂತ ಕಡಿಮೆ ದರದಲ್ಲಿ ಉಚಿತವಾಗಿ ವಿತರಣೆ ಮಾಡಲಾಗುತ್ತಿದ್ದು, ವಿದ್ಯಾರ್ಥಿಗಳು ಸೇವಾ ಸಿಂಧು ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸಬೇಕಾಗಿದೆ.

{Free Bus Pass} ಬಸ್ ಪಾಸ್ ಹೇಗೆ ಪಡೆಯಬೇಕು? ಇಲ್ಲಿದೆ ನೋಡಿ ವಿವರ!

ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವಂತಹ ಎಲ್ಲಾ ವಿದ್ಯಾರ್ಥಿಗಳು ಮೊದಲಿಗೆ ಸೇವಾ ಸಿಂಧು ಪೋರ್ಟಲ್ ನಲ್ಲಿ ಲಾಗಿನ್ ಆಗುವ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಸೇವಾ ಸಿಂಧು ಪೋರ್ಟಲ್ ನಲ್ಲಿ ಬಸ್ ಪಾಸ್ ಗೆ ಅರ್ಜಿಯನ್ನು ಸಲ್ಲಿಸಲು ಅವಕಾಶವಿರುತ್ತದೆ.

Also Read This: ಮುಂಗಾರು ಬೆಳೆ ವಿಮೆಗೆ ಅರ್ಜಿ ಸಲ್ಲಿಕೆ ಆರಂಭ! ಈಗಲೇ ಅರ್ಜಿ ಸಲ್ಲಿಸಿ.

ಬಸ್ ಪಾಸ್ ಪಡೆದುಕೊಳ್ಳಲು ದರಗಳು!

ಕರ್ನಾಟಕ ಸರ್ಕಾರದ ಆದೇಶದ ಪ್ರಕಾರ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿರುವ ಕೋರ್ಸಿನ ಆಧಾರದ ಮೇಲೆ 10 ಅಥವಾ 12 ತಿಂಗಳಿನವರೆಗೆ ಬಸ್ ಪಾಸ್ ಅನ್ನು ವಿದ್ಯಾರ್ಥಿಗಳಿಗೆ ನೀಡಲಾಗುತ್ತದೆ. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ₹150 ರೂಪಾಯಿ ನೀಡಬೇಕಾಗುತ್ತದೆ. ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ₹150 ರೂಪಾಯಿ ಇಂದ ₹1,350 ರೂಪಾಯಿಗಳನ್ನು ಬಸ್ ಪಾಸಿಗಾಗಿ ನೀಡಬೇಕಾಗುತ್ತದೆ.

ವಿದ್ಯಾರ್ಥಿನಿಯರು ಕೂಡ ಅರ್ಜಿ ಸಲ್ಲಿಸಬಹುದಾ?

ಪ್ರಸ್ತುತ ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವು ಅಧಿಕಾರದಲ್ಲಿ ಇರುವುದರಿಂದ ಕಾಂಗ್ರೆಸ್ ಸರ್ಕಾರ ನೀಡಿದ ಗ್ಯಾರಂಟಿಯ ಅನುಸಾರವಾಗಿ ಮಹಿಳೆಯರಿಗೆ ಬಸ್ಸಿನಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶವನ್ನು ಕಲ್ಪಿಸಿ ಕೊಟ್ಟಿರುವಾಗ ವಿದ್ಯಾರ್ಥಿನಿಯರು ಬಸ್ ಪಾಸಿಗೆ ಅರ್ಜಿಯನ್ನು ಸಲ್ಲಿಸುವ ಯಾವುದೇ ರೀತಿಯ ಅವಶ್ಯಕತೆ ಇರುವುದಿಲ್ಲ.

ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್

https://sevasindhuservices.karnataka.gov.in/buspassservices

WhatsApp Group Join Now
Telegram Group Join Now

Leave a Reply

Your email address will not be published. Required fields are marked *