Rain Alert: ನಮಸ್ಕಾರ ಎಲ್ಲರಿಗೂ ಈ ಒಂದು ಲೇಖನದ ಮೂಲಕ ಕರ್ನಾಟಕದ ಸಮಸ್ತ ಜನತೆಗೆ ತಿಳಿಸುವ ವಿಷಯವೇನೆಂದರೆ, ಕರ್ನಾಟಕದ ಯಾವ ಜಿಲ್ಲೆಗಳಲ್ಲಿ ಇವತ್ತು ಅತಿ ಹೆಚ್ಚು ಮಳೆ ಆಗಲಿದೆ ಮತ್ತು ಇನ್ನೂ ಕೆಲವು ದಿನಗಳ ಕಾಲ ಯಾವ ಜಿಲ್ಲೆಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆ ಆಗಲಿದೆ ಎಂಬ ಮಾಹಿತಿಯನ್ನು ತಿಳಿಸಿ ಕೊಡಲಿದ್ದೇನೆ. ಲೇಖನವನ್ನು ಕೊನೆಯವರೆಗೂ ಓದಿ.
Table of Contents
ಮುಂಗಾರು ಮಳೆಯ ಆರ್ಭಟ ಇಂದಿನಿಂದ ಅಂದರೆ ಜೂನ್ 21ರಿಂದ ಜೋರು ಆಗಲಿದೆ ಎಂಬ ಮಾಹಿತಿ ತಿಳಿದು ಬಂದಿದ್ದು, ಕರಾವಳಿ ಜಿಲ್ಲೆಗಳಲ್ಲಿ ಹಾಗೂ ಪಶ್ಚಿಮ ಘಟ್ಟದ ಜಿಲ್ಲೆಗಳಲ್ಲಿ ಒಂದು ವಾರದವರೆಗೆ ಅತ್ಯವಿಕವಾದ ಮಳೆ ಇರುವುದು ಎಂದು ಎಚ್ಚರಿಕೆ ನೀಡಲಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಅಂದರೆ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಪಶ್ಚಿಮ ಘಟ್ಟದಲ್ಲಿ ಬರುವ ಜಿಲ್ಲೆಗಳಾದ ಕೊಡಗು, ಹಾಸನ, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಮತ್ತು ಮೈಸೂರು ಜಿಲ್ಲೆಗಳಲ್ಲಿ ದಿನಾಂಕ 21 ಹಾಗೂ 22ನೇ ದಿನದಂದು ಆರೆಂಜ್ ಅಲರ್ಟ್ ನೀಡಲಾಗಿರುತ್ತದೆ.
ಬಲವಾದ ಗಾಳಿಯ ಜೊತೆಗೆ ಅದರ ಕಾರಣದಿಂದಾಗಿ ಪಶ್ಚಿಮ ಘಟ್ಟಗಳ ಕರಾವಳಿ ಪ್ರದೇಶಗಳು ಮತ್ತು ಪಕ್ಕದ ಜಿಲ್ಲೆಗಳಲ್ಲಿ ಜೂನ್ 23 ನೇ ತಾರೀಖಿನಂದು ಅಂದರೆ ಇವತ್ತು ಪ್ರತ್ಯೇಕವಾದ ಸ್ಥಳಗಳಲ್ಲಿ ವಿಪರೀತ ಮಳೆಯೊಂದಿಗೆ ಅತಿಯಾದ ಗಾಳಿ ಮಳೆಯಾಗುವ ಸಾಧ್ಯತೆ ಇದೆ. ಬಲವಾದ ಗಾಳಿ ಮತ್ತು ಭೂಕುಸಿತದ ಸಾಧ್ಯತೆ ಇದೆ. ಎಂದು ಹವಾಮಾನ ಇಲಾಖೆಯ ತಿಳಿಸಿರುತ್ತದೆ.
Also Read This: ಹತ್ತನೇ ಮತ್ತು ಪಿಯುಸಿ ಪಾಸಾದಂತವರಿಗೆ ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗಾವಕಾಶ! ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ ನೋಡಿ.
{Rain Alert} ಕರ್ನಾಟಕದ ಈ ಜಿಲ್ಲೆಗಳಲ್ಲಿ ಇವತ್ತು ಭಾರಿ ಮಳೆ!
ಕರ್ನಾಟಕ ರಾಜ್ಯದಲ್ಲಿ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಕೊಡಗು, ಹಾಸನ, ಮೈಸೂರು, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಇವತ್ತು ಅಂದರೆ ಜೂನ್ 23 ನೇ ತಾರೀಖಿನಂದು ಬಾರಿ ಪ್ರಮಾಣದ ಮಳೆಯ ಮುನ್ಸೂಚನೆಯನ್ನು ನೀಡಲಾಗಿದ್ದು, ಕರಾವಳಿ ಜಿಲ್ಲೆಗಳಲ್ಲಿ 40 ರಿಂದ 55 km ವೇಗದ ವರೆಗೆ ಬಲವಾದ ಗಾಳಿ ಬೀಸುವ ಸಾಧ್ಯತೆ ಇರುತ್ತದೆ ಆದ್ದರಿಂದ ಮೀನುಗಾರರು ಕೂಡ ಎಚ್ಚರಿಕೆಯಿಂದ ಇರಬೇಕು ಎಂದು ಮುನ್ನೆಚ್ಚರಿಕೆ ನೀಡಲಾಗಿರುತ್ತದೆ.
Also Read This: 10ನೇ ಪಾಸಾದ ವಿದ್ಯಾರ್ಥಿಗಳಿಗೆ ₹10,000 ಸಹಾಯಧನ! ಈಗಲೇ ಅರ್ಜಿ ಸಲ್ಲಿಸಿ!
ಸ್ನೇಹಿತರೆ ಇದಾಗಿತ್ತು ಕರ್ನಾಟಕದ ಯಾವ ಜಿಲ್ಲೆಗಳಲ್ಲಿ ಜೂನ್ 23ರಂದು ಮಳೆಯಾಗುವ ಸಾಧ್ಯತೆ ಇದೆ ಮತ್ತು ಯಾವ ಜಿಲ್ಲೆಗಳಲ್ಲಿ ಯಾವ ಅಲರ್ಟ್ ಅನ್ನು ಘೋಷಿಸಲಾಗಿರುತ್ತದೆ ಎಂಬ ಮಾಹಿತಿಯನ್ನು ನೀಡಿರುತ್ತೇನೆ. ಲೇಖನವು ಇಷ್ಟವಾದಲ್ಲಿ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.