Grama Lekkiga Nemakati: ನಮಸ್ಕಾರ ಸ್ನೇಹಿತರೇ,ಕರ್ನಾಟಕ ಕಂದಾಯ ಇಲಾಖೆಯಲ್ಲಿ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ಬೃಹತ್ ನೇಮಕಾತಿ ಮಾಡಿಕೊಳ್ಳಲು ಕರ್ನಾಟಕ ರಾಜ್ಯ ಸರ್ಕಾರ ತಿರ್ಮಾನ ಮಾಡಿದೆ. ಕರ್ನಾಟಕದ ಎಲ್ಲಾ ಜಿಲ್ಲೆಗಳಲ್ಲಿ ಖಾಲಿ ಇರುವ ಸುಮಾರು 1,500 ಗ್ರಾಮ ಆಡಳಿತ ಅಧಿಕಾರಿ (ಗ್ರಾಮ ಲೆಕ್ಕಿಗರ)) ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಲಾಗಿದೆ.
ಪ್ರಸ್ತುತ ನಮ್ಮ ರಾಜ್ಯದಲ್ಲಿ ಖಾಲಿ ಇರುವ 1500 ಗ್ರಾಮ ಲೆಕ್ಕಿಗರ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಶೀಘ್ರದಲ್ಲಿಯೇ ಅರ್ಜಿ ಆಹ್ವಾನಿಸಲಾಗುವುದು ಎಂದು ತಿಳಿದು ಬಂದಿದೆ ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ ಕೊನೆವರೆಗೂ ಓದಿ.
ಸಂಬಳ
- ರೂ. ₹21,400 – ₹42,000
ಶೈಕ್ಷಣಿಕ ಅರ್ಹತೆಗಳು!
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಅಂಗೀಕೃತ ಬೋರ್ಡ್ ನಿಂದ ಪಿಯುಸಿ ಮುಗಿಸಿರಬೇಕು ಮತ್ತು ಕಂಪ್ಯೂಟರ್ ಜ್ಞಾನ ಹೊಂದಿರಬೇಕು ಎಂದು ಕೂಡ ತಿಳಿಸಲಾಗಿದೆ.
ಅರ್ಜಿ ಶುಲ್ಕ
- ಸಾಮಾನ್ಯ ಅಭ್ಯರ್ಥಿಗಳಿಗೆ : ರೂ. ₹600/- ಇರುತ್ತದೆ
- ಪ್ರವರ್ಗ 2a, 2b, 3a & 3b ಅಭ್ಯರ್ಥಿಗಳಿಗೆ ರೂ. ₹300/- ಇರುತ್ತದೆ
- ಮಾಜಿ ಸೈನಿಕ ಅಭ್ಯರ್ಥಿಗಳಿಗೆ: ರೂ. ₹50/- ಇರುತ್ತದೆ
- ಪ.ಜಾ/ ಪಪಂ/ ಪ್ರವರ್ಗ 1/ ಅಂಗವಿಕಲ ಅಭ್ಯರ್ಥಿಗಳಿಗೆ: ಅರ್ಜಿ ಶುಲ್ಕ ಇರುವುದಿಲ್ಲ ಎಂದು ತಿಳಿಸಲಾಗಿದೆ
ವಯೋಮಿತಿ
ಕನಿಷ್ಟ 18 ವರ್ಷ ದಾತಿರಬೇಕು & ಗರಿಷ್ಟ 35 ವರ್ಷ ಮೀರಿರಬಾರದು ಎಂದು ತಿಳಿಸಲಾಗಿದೆ.
ಪ್ರಮುಖ ದಿನಾಂಕಗಳು ಇಲ್ಲಿವೆ!
- ಅರ್ಜಿ ಸಲ್ಲಿಕೆ ಆರಂಭದ ದಿನಾಂಕ: ಶೀಘ್ರದಲ್ಲೆ ಪ್ರಾರಂಭ ಆಗಲಿದೆ.
- ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ: ಶೀಘ್ರದಲ್ಲೆ ತಿಳಿಸಲಾಗುವುದು