Grama Panchayat Jobs: ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನದ ಮೂಲಕ ಕರ್ನಾಟಕದ ಸಮಸ್ತ ಜನತೆಗೆ ತಿಳಿಸುವ ವಿಷಯವೇನೆಂದರೆ ಗ್ರಾಮ ಪಂಚಾಯಿತಿಯಲ್ಲಿ ಖಾಲಿ ಹುದ್ದೆಗಳದ್ದು ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು ಸಂಪೂರ್ಣವಾದ ಮಾಹಿತಿಯನ್ನು ಕೆಳಗೆ ನೀಡಿರುತ್ತೇನೆ ಲೇಖನವನ್ನು ಕೊನೆಯವರೆಗೂ ಓದಿ.
ಸ್ನೇಹಿತರೆ,ಇದೀಗ ಕರ್ನಾಟಕ ರಾಜ್ಯ ಸರ್ಕಾರವು ಗ್ರಾಮ ಪಂಚಾಯತ್ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ ಎಂದು ತಿಳಿಸಲಾಗಿದೆ. ಹಾಗಿದ್ರೆ ಯಾವ ಜಿಲ್ಲೆಯಲ್ಲಿ ಅರ್ಜಿ ಆಹ್ವಾನಿಸಲಾಗಿದೆ, ಏನೇನು ದಾಖಲೆಗಳು ಬೇಕಾಗುತ್ತವೆ ಎನ್ನುವುದನ್ನು ತಿಳಿದುಕೊಳ್ಳೋಣ ಬನ್ನಿ.
ನಮ್ಮ ರಾಜ್ಯದ ಅಂದ್ರೆ ಕರ್ನಾಟಕ ರಾಜ್ಯದ ಶಿವಮೊಗ್ಗ ಜಿಲ್ಲೆಯಲ್ಲಿರುವ ಗ್ರಾಮ ಪಂಚಾಯತ್ಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಆಗಿದೆ. ನಿರುದ್ಯೋಗಿಗಳಿಗೆ ಇದು ಒಂದು ರೀತಿಯಲ್ಲಿ ಸುವರ್ಣಾವಕಾಶವಾಗಿದ್ದು, ಕೂಡಲೇ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಎಂದು ತಿಳಿಸಲಾಗಿದೆ.
ಯಾವ ಹುದ್ದೆಗಳು ಖಾಲಿ ಇವೆ?
- ಗ್ರಂಥಾಲಯ ಮೇಲ್ವಿಚಾರಕರು
- ಮಾಹಿತಿ ಕೇಂದ್ರಗಳ ಮೇಲ್ವಿಚಾರಕರು
ಶೈಕ್ಷಣಿಕ ಅರ್ಹತೆ ಏನಿರಬೇಕು?
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವವರು ರಾಜ್ಯದ ಮಾನ್ಯತೆ ಪಡೆದ ಯಾವುದೇ ವಿಶ್ವ ವಿದ್ಯಾಲಯದಿಂದ ಕಡ್ಡಾಯವಾಗಿ 12ನೇ ತರಗತಿ ಅಂದರೆ ದ್ವಿತೀಯ ಪಿಯುಸಿ ಪಾಸಾಗಿರಬೇಕು. ಲೈಬ್ರರಿ ಸರ್ಟಿಫಿಕೇಟ್(Library Certificate) ಕೋರ್ಸ್ ಹಾಗೂ ಮೂರು ತಿಂಗಳ ಕಂಪ್ಯೂಟರ್ ಕೋರ್ಸ್ ಮುಗಿಸಿರಬೇಕು ಎಂದು ತಿಳಿಸಲಾಗಿದೆ.
ಸಂಬಳ ಎಷ್ಟಿರುತ್ತದೆ?
ಈ ಹುದ್ದೆಗಳಿಗೆ ಆಯ್ಕೆ ಆಗುವ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ₹16,000/- ರೂ. ವೇತನ ನೀಡಲಾಗುತ್ತದೆ ಎಂದು ತಿಳಿಸಲಾಗಿದೆ.
ವಯೋಮಿತಿ
ಅರ್ಜಿ ಸಲ್ಲಿಸುವವರು ಕನಿಷ್ಟ 18 ವರ್ಷಗಳು ಮೇಲ್ಪಟ್ಟವರಾಗಿರಬೇಕು ಹಾಗೂ 34 ವರ್ಷಗಳು ಮೀರಿರಬಾರದು.
ಅರ್ಜಿ ಸಲ್ಲಿಸಲು ಫೆಬ್ರವರಿ 23 ಕೊನೆಯ ದಿನವಾಗಿದೆ.
ಅರ್ಜಿ ಸಲ್ಲಿಸುವ ವಿಧಾನ
ನೀವು ರಾಜ್ಯ ಸರ್ಕಾರದ ಪಂಚಾಯತ್ ರಾಜ್ ಇಲಾಖೆಯ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಬೇಕು. ಅಲ್ಲಿ ನಿಮಗೆ ಅರ್ಜಿಯ ನಮೂನೆಯು ಕಾಣಿಸುತ್ತದೆ ಎಂದು ತಿಳಿಸಲಾಗಿದೆ. ಅದನ್ನು ಡೌನ್ಲೋಡ್ ಮಾಡಿಕೊಂಡು ಅಲ್ಲಿ ಕೇಳಲಾಗುವ ಎಲ್ಲ ವಿವರಗಳನ್ನು ಸರಿಯಾಗಿ ಭರ್ತಿ ಮಾಡಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ತಿಳಿಸಲಾಗಿದೆ.