Post Office Jobs: 10ನೇ ಪಾಸಾದವರಿಗೆ ಅಂಚೆ ಇಲಾಖೆಯಲ್ಲಿ ಉದ್ಯೋಗವಕಾಶ! 30,000ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿ ಶೀಘ್ರವೇ ಆರಂಭ!

Gramin Dak Sevak Post Office Jobs: ನಮಸ್ಕಾರ ಸ್ನೇಹಿತರೆ, ಈ ಲೇಖನದ ಮೂಲಕ ಕರ್ನಾಟಕದ ಸಮಸ್ತ ಜನತೆಗೆ ತಿಳಿಸುವ ವಿಷಯವೇನೆಂದರೆ, ಅಂಚೆ ಇಲಾಖೆಯಲ್ಲಿ ಖಾಲಿ ಹುದ್ದೆಗಳ ನೇಮಕಾತಿಯು ಶೀಘ್ರವೇ ಆರಂಭವಾಗಲಿದ್ದು, ಇದರ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ನೀಡಿರುತ್ತೇನೆ. ಲೇಖನವನ್ನು ಕೊನೆಯವರೆಗೂ ಓದಿ, ಸಂಪೂರ್ಣವಾದ ಮಾಹಿತಿ ದೊರಕಲಿದೆ.

ಹೌದು ಸ್ನೇಹಿತರೆ, ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಹುದ್ದೆಗಳನ್ನು ಇನ್ನೇನು ಕೆಲವೇ ದಿನಗಳಲ್ಲಿ ಭರ್ತಿ ಮಾಡಲು ಹಾಗೂ ಅರ್ಜಿ ಸಲ್ಲಿಸಲು ಅವಕಾಶವನ್ನು ಕಲ್ಪಿಸಿಕೊಡಲಾಗುವುದು, ಎಂದು ತಿಳಿದುಬಂದಿದೆ.

Post Office Jobs 2024

ಭಾರತೀಯ ಅಂಚೆ ಇಲಾಖೆಯು ಗ್ರಾಮೀಣ ಡಾಕ್ ಸೇವಕ (Gramin Dak Sevak) ಹುದ್ದೆಗಳಿಗೆ ನೇಮಕಾತಿಯ ಅಧಿಸೂಚನೆಯನ್ನು ಇನ್ನೇನು ಹೊರಡಿಸಲಿದೆ. ಗ್ರಾಮೀಣ ಪ್ರದೇಶದ ಭಾಗಗಳಲ್ಲಿ ಸರ್ಕಾರಿ ಉದ್ಯೋಗಗಳನ್ನು ಹುಡುಕುತ್ತಿರುವವರಿಗೆ ಇದು ಒಂದು ಶುಭಸುದ್ಧಿ ಎಂದು ಹೇಳಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡಲು ಸಂಪೂರ್ಣವಾದ ಮಾಹಿತಿ ಈ ಕೆಳಗಿನ ನೀಡಿರುತ್ತೇನೆ.

ಗ್ರಾಮೀಣ ಡಾಕ್ ಸೇವಕ (GDS) ಹುದ್ದೆಗಳ ನೇಮಕಾತಿಗೆ ಇನ್ನೂ ಕೂಡ ಅಧಿಕೃತವಾದ ಅಧಿಸೂಚನೆಯನ್ನು ಹೊರಡಿಸಲಾಗಿಲ್ಲ. ಅಧಿಕೃತವಾದ ಅಧಿಸೂಚನೆಯನ್ನು 2024ರ ಮೂರನೇ ತ್ರೈಮಾಸಿಕದಲ್ಲಿ ಬಿಡುಗಡೆ ಮಾಡುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

(Gramin Dak Sevak) ವಯೋಮಿತಿ

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಯು 18 ವರ್ಷಕ್ಕಿಂತ ಮೇಲ್ಪಟ್ಟಿರಬೇಕು. ಮತ್ತು ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಯ ವಯಸ್ಸು 40 ವರ್ಷಕ್ಕಿಂತ ಮೇರಿರಬಾರದು.

(Gramin Dak Sevak) ವೇತನ ಶ್ರೇಣಿ

  • ಶಾಖಾ ಮುಖ್ಯ ಪೋಸ್ಟ್ ಮಾಸ್ಟರ್ ಹುದ್ದೆಗೆ – ₹12,000 – ₹29,380 ಪ್ರತಿ ತಿಂಗಳಿಗೆ.
  • ಸಹಾಯಕ ಶಾಖಾ ಮುಖ್ಯ ಪೋಸ್ಟ್ ಮಾಸ್ಟರ್ ಹುದ್ದೆಗೆ – ₹10,000 – ₹24,470 ಪ್ರತಿ ತಿಂಗಳಿಗೆ.

ಶೈಕ್ಷಣಿಕ ಅರ್ಹತೆ

ಪೋಸ್ಟ್ ಆಫೀಸ್ ಗ್ರಾಮೀಣ ಡಾಕ್ ಸೇವಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಯು 10ನೇ ತರಗತಿ ಪಾಸ್ ಆಗಿರಬೇಕು ಎಂದು ತಿಳಿಸಲಾಗಿದೆ. ಹಾಗೂ ಕನಿಷ್ಠ ಮಾಧ್ಯಮಿಕ ಹಂತದವರೆಗೆ ಸ್ಥಳೀಯ ಭಾಷೆಯಲ್ಲಿ ಓದಿರಬೇಕು ಎಂದು ತಿಳಿಸಲಾಗಿದೆ.

ಅರ್ಜಿ ಶುಲ್ಕ

  • ಸಾಮಾನ್ಯ ಹಾಗೂ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ – ₹100/- ಅರ್ಜಿ ಶುಲ್ಕ.
  • ಮಹಿಳಾ ಅಭ್ಯರ್ಥಿಗಳು ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ.

ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕವೇ ಪಾವತಿಸಬೇಕು ಎಂದು ತಿಳಿಸಲಾಗಿದೆ.

ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್ 

ಅಪ್ಲೈ ಮಾಡಿ

ಈ ಹುದ್ದೆಗಳಿಗೆ ಅಂದರೆ ಪೋಸ್ಟ್ ಆಫೀಸಿನ ಗ್ರಾಮೀಣ ಡಾಕ್ ಸೇವಕ ಹುದ್ದೆಗಳಿಗೆ ಇನ್ನೂ ಕೂಡ ಅರ್ಜಿ ಸಲ್ಲಿಸಲು ಅಧಿಕೃತವಾಗಿ ಅಧಿಸೂಚನೆಯನ್ನು ಹೊರಡಿಸಿಲ್ಲ ಆದರೆ ಇನ್ನೇನು ಕೆಲವೇ ದಿನಗಳಲ್ಲಿ ಅಧಿಸೂಚನೆಯನ್ನು ಹೊರಡಿಸುವ ಎಲ್ಲಾ ಸಾಧ್ಯತೆಗಳಿವೆ ಎಂದು ತಿಳಿದುಬಂದಿದೆ.

WhatsApp Group Join Now
Telegram Group Join Now

Leave a Reply

Your email address will not be published. Required fields are marked *