Indian Navy Recruitment: ನಮಸ್ಕಾರ ಸ್ನೇಹಿತರೆ, ಇಂಡಿಯನ್ ಮರ್ಚೆಂಟ್ ನಾವಿ(Indian marchant navy)ಯಲ್ಲಿ ನಲ್ಲಿ ಇರುವ ಒಟ್ಟು 4000 ಹುದ್ದೆಗಳ ಭರ್ತಿಗೆ Online ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತಿ ಮತ್ತು ಅರ್ಹತೆಗಳ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಈ ಲೇಖನವನ್ನು ಕೊನೆಯವರೆಗೂ ಓದಿ ಸಂಪೂರ್ಣವಾದ ಮಾಹಿತಿ ದೊರಕುತ್ತದೆ.
ಇಂಡಿಯನ್ ಮರ್ಚೆಂಟ್ ನಾವಿ (Indian Merchant Navy) ಯಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆಯ ವಿಧಾನ ಮತ್ತು ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ನೀಡಿರುತ್ತೇನೆ ನೋಡಿ.
ಅರ್ಜಿ ಸಲ್ಲಿಸಲು ವಿದ್ಯಾರ್ಹತೆ ಏನಿರಬೇಕು?
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಯು 10ನೇ ತರಗತಿ ಪಾಸ್ ಆಗಿರಬೇಕು ಅಥವಾ 12ನೇ ತರಗತಿ ಪಾಸ್ ಆಗಿರಬೇಕು ಅಥವಾ ಐಟಿಐ ಮುಗಿದಿರಬೇಕು ಎಂಬ ವಿದ್ಯಾರ್ಹತೆಯನ್ನು ನೀಡಲಾಗಿದೆ.
ವಯೋಮಿತಿ ಎಷ್ಟಿರಬೇಕು?
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಟ 17.5 ವರ್ಷ ತುಂಬಿರಬೇಕು ಮತ್ತು ಗರಿಷ್ಟ 27 ವರ್ಷದವರೆಗೆ ಅರ್ಜಿ ಸಲ್ಲಿಸಬಹುದು ಎಂದು ತಿಳಿಸಲಾಗಿದೆ.
ಅರ್ಜಿ ಶುಲ್ಕ ಎಷ್ಟು ಇರುತ್ತದೆ?
- ರೂ. 100/-
- ಅರ್ಜಿ ಶುಲ್ಕವನ್ನು ನೀವು Online ಮೂಲಕ ಪಾವತಿಸಬಹುದು ಎಂದು ತಿಳಿಸಲಾಗಿದೆ.
ಆಯ್ಕೆ ವಿಧಾನ ಹೇಗಿರುತ್ತೆ?
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆ ಮತ್ತು ಕೌಶಲ್ಯ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ ಎಂದು ಕೂಡ ತಿಳಿಸಲಾಗಿದೆ.
ಅರ್ಜಿ ಸಲ್ಲಿಸುವ ವಿಧಾನ ಹೀಗಿದೆ!
ಅರ್ಹ & ಆಸಕ್ತ ಅಭ್ಯರ್ಥಿಗಳು Indian Marhant Navy ದ ಅಧಿಕೃತ ಜಾಲತಾಣ https://sealanemaritime.in ಜಾಲತಾಣದಲ್ಲಿ ಕೊನೆಯ ದಿನಾಂಕ 30-04-2024 ರ ಒಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಎಂದು ತಿಳಿಸಲಾಗಿದೆ.
ಪ್ರಮುಖ ದಿನಾಂಕಗಳು:
- ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ: 11-03-2024
- ಅರ್ಜಿ ಸಲ್ಲಿಕೆ ಕೊನೆ ದಿನಾಂಕ : 30-04-2024
- ಲಿಖಿತ ಪರೀಕ್ಷೆ ಯಾವಾಗ? – ಮೇ, 2024