Kotak Scholarship: ನಮಸ್ಕಾರ ಎಲ್ಲರಿಗೂ, ಈ ಒಂದು ಲೇಖನದ ಮೂಲಕ ಕರ್ನಾಟಕದ ಸಮಸ್ತ ಜನತೆಗೆ ತಿಳಿಸುವ ವಿಷಯವೇನೆಂದರೆ, 10ನೇ ತರಗತಿ ಪಾಸ್ ಆಗಿದ್ದರೆ ಕೋಟಕ್ ಮಹಿಂದ್ರ ಗ್ರೂಪ್ ವತಿಯಿಂದ ಕೋಟಕ್ ಎಜುಕೇಶನ್ ಫೌಂಡೇಶನ್ ನಲ್ಲಿ ಸುಮಾರು ₹73,000 ವರೆಗೆ ವಿದ್ಯಾರ್ಥಿ ವೇತನವನ್ನು (Scholarship) ನೀಡಲಾಗುವುದು ಆಸಕ್ತಿ ಮತ್ತು ಅರ್ಹತೆಯುಳ್ಳ ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸಕ್ಕಾಗಿ ಹಣವನ್ನು ಪಡೆದುಕೊಳ್ಳಬಹುದು. ಅರ್ಜಿ ಸಲ್ಲಿಸಲು ಸಂಪೂರ್ಣವಾದ ವಿವರ ಇಲ್ಲಿದೆ, ಲೇಖನವನ್ನು ಪೂರ್ತಿಯಾಗಿ ಓದಿ.
Kotak Scholarship Online Application
ದೇಶದ ಪ್ರಖ್ಯಾತ ಸಂಸ್ಥೆ ಆಗಿರುವ ಕೋಟಕ್ ಮಹಿಂದ್ರ ಗ್ರೂಪ್ ಸಂಸ್ಥೆಯು ಎಜುಕೇಶನ್ ಫೌಂಡೇಶನ್ ಕಡೆಯಿಂದ ಎಸ್.ಎಸ್.ಎಲ್.ಸಿ ಪಾಸ್ ಆಗಿರುವ ವಿದ್ಯಾರ್ಥಿಗಳಿಗೆ ತಮ್ಮ ಮುಂದಿನ ವಿದ್ಯಾಭ್ಯಾಸವನ್ನು ಉತ್ತಮವಾಗಿ ಮುಂದುವರಿಸಲು ಊಟಕ್ ಎಜುಕೇಶನ್ ಫೌಂಡೇಶನ್ ಕಡೆಯಿಂದ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತಿದ್ದು, ಆಸಕ್ತಿ ಮತ್ತು ಅರ್ಹತೆಯುಳ್ಳ ವಿದ್ಯಾರ್ಥಿಗಳು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿ.
ಸ್ನೇಹಿತರೆ ಫೋಟೋ ಸ್ಕಾಲರ್ಶಿಪ್ ಅರ್ಜಿ ಸಲ್ಲಿಸಲು ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದರೆ ಹಾಗೂ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದರೆ ಪ್ರತಿ ತಿಂಗಳು 3500 ಯಂತೆ 21 ತಿಂಗಳವರೆಗೆ ಸುಮಾರು 73,500 ವರೆಗೆ ವಿದ್ಯಾರ್ಥಿ ವೇತನವನ್ನು ಪಡೆಯಬಹುದಾಗಿರುತ್ತದೆ. ಹಾಗಾಗಿ ವಿದ್ಯಾರ್ಥಿಗಳು ಈ ಲಾಭವನ್ನು ಪಡೆದುಕೊಳ್ಳಬೇಕು ಎಂಬ ಆಶಯದಿಂದ ಈ ಲೇಖನವನ್ನು ಹಾಕಲಾಗಿರುತ್ತದೆ.
ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು:
ಈ ಸ್ಕಾಲರ್ ಶಿಪ್ ಗೆ ಅರ್ಜಿ ಸಲ್ಲಿಸುವ ವಿದ್ಯಾರ್ಥಿಯು 10ನೇ ತರಗತಿಯಲ್ಲಿ 85% ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದಿರಬೇಕು.
ಕೋಟಕ್ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಯು 2024 25ರ ಶೈಕ್ಷಣಿಕ ವರ್ಷದಲ್ಲಿ ಕಲೆ ವಿಜ್ಞಾನ ಅಥವಾ ವಾಣಿಜ್ಯ ಯಾವುದಾದರೂ ಇತರ ಕೋರ್ಸ್ಗೆ ಕಾಲೇಜುಗಳಲ್ಲಿ ಪ್ರವೇಶ ಪಡೆದಿರಬೇಕು.
ಕೋಟಕ್ ಸ್ಕಾಲರ್ಶಿಪ್ (Kotak Scholarship) ಗೆ ಅರ್ಜಿ ಹಾಕಲು ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ಆದಾಯ 3.2 ಲಕ್ಷಕ್ಕಿಂತ ಕಡಿಮೆ ಇರಬೇಕು ಎಂದು ತಿಳಿಸಲಾಗಿದೆ.
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು:
- 10ನೇ ತರಗತಿ ಅಂಕಪಟ್ಟಿ
- ಪಾಸ್ಪೋರ್ಟ್ ಅಳತೆಯ ಭಾವಚಿತ್ರ
- ಕುಟುಂಬದ ರೇಷನ್ ಕಾರ್ಡ್
- ಪೋಷಕರ ಹಾಗೂ ವಿದ್ಯಾರ್ಥಿಗಳ ಆಧಾರ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ವರ್ಗಾವಣೆ ಪ್ರಮಾಣ ಪತ್ರ
- ಬ್ಯಾಂಕ್ ಪಾಸ್ ಬುಕ್ ವಿವರಗಳು
ಸ್ನೇಹಿತರೆ ಈ ಮೇಲೆ ನೀಡಿರುವಂತಹ ದಾಖಲೆಗಳನ್ನು ನೀವು ತೆಗೆದುಕೊಂಡು, ಕೋಟಕ್ ಸ್ಕಾಲರ್ಶಿಪ್ ಗೆ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ. ನೀವು ಕೊನೆಯ ದಿನಾಂಕದೊಳಗೆ ಅರ್ಜಿ ಸಲ್ಲಿಸಿದರೆ ಮಾತ್ರ ಮಾನ್ಯವಾಗಿರುತ್ತದೆ ಎಂದು ಹೇಳಲು ಬಯಸುತ್ತೇನೆ.
ಹೇಗೆ ಅರ್ಜಿ ಸಲ್ಲಿಸಬೇಕು?
ಸ್ನೇಹಿತರೆ ನೀವು ಅರ್ಜಿ ಸಲ್ಲಿಸಲು ಕೆಳಗಡೆ ಜಾಲತಾಣದ ಲಿಂಕನ್ನು ಕೊಟ್ಟಿರುತ್ತೇನೆ ಅದನ್ನು ಬಳಸಿಕೊಂಡು ನೀವು ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಕೋಟಕ್ ಸ್ಕಾಲರ್ಶಿಪ್ ಅನ್ನು ಪಡೆದುಕೊಳ್ಳಲು ಕೆಲವೊಂದು ಅರ್ಹತೆಗಳಿವೆ. ಅವುಗಳನ್ನು ಸಂಪೂರ್ಣವಾಗಿ ತಿಳಿಯಲು ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15/07/2024
ಮೇಲೆ ನೀಡಿರುವ ದಾಖಲೆಗಳನ್ನು ತೆಗೆದುಕೊಂಡು ಹಾಗೂ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡುವ ಮೂಲಕ ಇನ್ನಷ್ಟು ವಿವರಗಳನ್ನು ಪಡೆಯುವ ಮೂಲಕ ನೀವು ಕೋಟಕ್ ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
ಇದನ್ನು ಓದಿ: Home Loan: ಮನೆಯ ಮೇಲೆ ಸಾಲ ಪಡೆಯುವವರಿಗೆ ಹೊಸ ರೂಲ್ಸ್! ಸರ್ಕಾರದ ಹೊಸ ಆದೇಶ!