New Ration Card and Correction: ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನದ ಮೂಲಕ ಕರ್ನಾಟಕದ ಸಮಸ್ತ ಜನತೆಗೆ ತಿಳಿಸುವ ವಿಷಯವೇನೆಂದರೆ ನೀವೇನಾದರೂ ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸಬೇಕು ಎಂದು ಕಾದು ಕುಳಿತಿದ್ದೀರಾ? ಅಥವಾ ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಬೇಕು ಎಂದು ಕಾದು ಕುಳಿತಿದ್ದೀರಾ? ನಿಮಗೆ ಒಂದು ಶುಭ ಸುದ್ದಿ ಇಲ್ಲಿದೆ ನೋಡಿ.
ಹೊಸ ರೇಷನ್ ಕಾರ್ಡ್ ಅರ್ಜಿ ಆರಂಭ?
ಹೌದು ಸ್ನೇಹಿತರೆ ತುಂಬಾ ಜನರು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಹಾಕಲು ಕಾಯುತ್ತಿದ್ದಾರೆ ಅಂತವರಿಗೆ ಸರ್ಕಾರದ ಕಡೆಯಿಂದ ಈಗಾಗಲೇ ಎರಡು ಮೂರು ಸಲ ಅವಕಾಶ ಕೊಟ್ಟಿರುತ್ತದೆ ಸರ್ವರ್ ದೋಷದ ಕಾರಣದಿಂದಾಗಿ ಅರ್ಜಿ ಸಲ್ಲಿಸಲು ಹಾಗೂ ತಿದ್ದುಪಡಿ ಮಾಡಿಸಲು ಸಾಧ್ಯವಾಗಿಲ್ಲ ಇದರಿಂದ ಜನರು ಬೇಸತ್ತು ಹೋಗಿದ್ದಾರೆ.
ಹಾಗಾಗಿ ಹೊಸ ರೇಷನ್ ಕಾರ್ಡ್ ಸಂಬಂಧಿಸಿದಂತೆ ಆಹಾರ ಇಲಾಖೆಯ ಸಚಿವರಾದ ಕೆಎಚ್ ಮುನಿಯಪ್ಪ ರವರು ಈ ಬಗ್ಗೆ ಒಂದು ಮಾಹಿತಿಯನ್ನು ಹಂಚಿಕೊಂಡಿದ್ದಾರೆ ಸದ್ಯದ ಮಟ್ಟಿಗೆ ಹೊಸ ರೇಷನ್ ಕಾರ್ಡ್ ಮಾಡಿಸಲು ಸಾಧ್ಯವಿಲ್ಲ ಎಂದು ಪೇಪರ್ ಸ್ಟೇಟ್ಮೆಂಟ್ ನೀಡಿರುತ್ತಾರೆ. ಇದರ ಬಗ್ಗೆ ಇಲ್ಲಿದೆ ನೋಡಿ ವಿವರ.
ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಯಾವಾಗ ಆರಂಭ?
ಹೌದು ಸ್ನೇಹಿತರೆ ಆಹಾರ ಇಲಾಖೆ ಸಚಿವರಾದ ಕೆಎಚ್ ಮುನಿಯಪ್ಪನವರು ತಿಳಿಸಿರುವ ಪ್ರಕಾರ ಈಗಾಗಲೇ 2.38 ಲಕ್ಷ ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲಾಗಿರುತ್ತದೆ ಆ ಎಲ್ಲಾ ಅರ್ಜಿಗಳನ್ನು ವಿತರಣೆ ಮಾಡಿದ ನಂತರ ಹೊಸ ರೇಷನ್ ಕಾರ್ಡ್ ಗಳಿಗೆ ತಿದ್ದುಪಡಿ ಅವಕಾಶ ಕೊಡಲಾಗುವುದು ಎಂದು ಸಚಿವರು ತಿಳಿಸಿರುತ್ತಾರೆ.
ಹೊಸ ರೇಷನ್ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಸಲು ಸಂಬಂಧಿಸಿದಂತೆ ಕೆಲವೊಂದು ಖಾಸಗಿ ಮಾಧ್ಯಮಗಳು ಹಾಗೂ ಇನ್ನಿತರ ಅನಧಿಕೃತ ಮೂಲಗಳಿಂದ ತಿಳಿದುಬಂದ ಮಾಹಿತಿ ಏನೆಂದರೆ, ರೇಷನ್ ಕಾರ್ಡ್ ಅರ್ಜಿ ಹಾಕಲು ಜೂನ್ ಕೊನೆಯ ವಾರದಲ್ಲಿ ಅಥವಾ ಜುಲೈ ತಿಂಗಳ ಮೊದಲ ವಾರದಲ್ಲಿ ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ಮತ್ತು ಅವಕಾಶವನ್ನು ಕಲ್ಪಿಸಿಕೊಡಲಾಗುವುದೇ ಎಂಬ ಮಾಹಿತಿ ತಿಳಿದುಬಂದಿದೆ.
ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸಲು ಮತ್ತು ಹೊಸ ಸದಸ್ಯರನ್ನು ಸೇರ್ಪಡೆ ಮಾಡಿಸಲು ಜೂನ್ 21ನೇ ತಾರೀಕಿನಂದು ಮಧ್ಯಾಹ್ನ 12 ಗಂಟೆಯಿಂದ ಸಂಜೆ 6 ಗಂಟೆವರೆಗೆ ಕಾಲಾವಕಾಶವನ್ನು ಕಲ್ಪಿಸಿಕೊಡಲಾಗುವುದು ಎಂದು ಖಾಸಗಿ ಮಾಧ್ಯಮಗಳಿಂದ ಹಾಗೂ ಅನಧಿಕೃತ ಮೂಲಗಳಿಂದ ತಿಳಿದು ಬಂದಿದೆ.
ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು!
- ಆಧಾರ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಮೊಬೈಲ್ ನಂಬರ್
- ಇತ್ತೀಚಿನ ಫೋಟೋ
- ಜನನ ಪ್ರಮಾಣ ಪತ್ರ (6 ವರ್ಷದ ಒಳಗಿನ ಮಕ್ಕಳು ಇದ್ದಲ್ಲಿ)
ಎಲ್ಲ ಮೇಲಿನ ದಾಖಲೆಗಳನ್ನು ಸರಿಪಡಿಸಿ ಇಟ್ಟುಕೊಂಡಿರುವ ರೇಷನ್ ಕಾರ್ಡ್ ಅನ್ನು ಅರ್ಜಿ ಸಲ್ಲಿಸಲು ಅವಕಾಶವನ್ನು ಕಲ್ಪಿಸಿ ಕೊಟ್ಟ ತಕ್ಷಣ ನಿಮ್ಮ ಹತ್ತಿರದ ಗ್ರಾಮ ಒನ್ ಕರ್ನಾಟಕ ಒನ್ ಇಂತಹ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿರುತ್ತದೆ ಅಥವಾ ತಿದ್ದುಪಡಿ ಮಾಡಿಸಬಹುದಾಗಿರುತ್ತದೆ.