New Ration Card: ನಮಸ್ಕಾರ ಎಲ್ಲರಿಗೂ ಕರ್ನಾಟಕದ ಸಮಸ್ತ ಜನತೆಗೆ ತಿಳಿಸುವ ಪ್ರಮುಖ ವಿಷಯವೇನೆಂದರೆ ನೀವೇನಾದರೂ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಬಯಸುತ್ತಿದ್ದೀರಿ ಅಂತ ಅಂದರೆ ಹಾಗೂ ನಿಮ್ಮ ರೇಷನ್ ಕಾರ್ಡ್ ನಲ್ಲಿ ಯಾವುದೇ ರೀತಿಯಾದ ತಿದ್ದುಪಡಿಯನ್ನು ನೀವು ಮಾಡಿಸಲು ಬಯಸುತ್ತಿದ್ದರೆ, ಈ ಮಾಹಿತಿಯನ್ನು ನೀವು ತಪ್ಪದೆ ತಿಳಿದುಕೊಳ್ಳಬೇಕಾಗಿದೆ. ಅದೇನೆಂಬುದನ್ನು ತಿಳಿಯಲು ಸಂಪೂರ್ಣವಾಗಿ ಕೊನೆಯವರೆಗೂ ಓದಿ.
ತುಂಬಾ ಜನರು ಹೊಸ ರೇಷನ್ ಕಾರ್ಡಿಗೆ ಅರ್ಜಿ ಹಾಕಲು ಹಾಗು ತಿದ್ದುಪಡಿ ಮಾಡಿಸಲು ಕಾತುರದಿಂದ ಕಾಯುತ್ತಿದ್ದಾರೆ ಎಂದು ಹೇಳಿದರೆ ತಪ್ಪಾಗಲಾರದು. ಹಾಗಾಗಿ ಸರ್ಕಾರದ ಕಡೆಯಿಂದ ಶುಭ ಸುದ್ದಿ ಎಂದೇ ಹೇಳಬಹುದು. ಈಗಾಗಲೇ ರೇಷನ್ ಕಾರ್ಡ್ ತಿದ್ದುಪಡಿ ಹಾಗೂ ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಲು ಹಲವಾರು ಸಲ ಕರ್ನಾಟಕ ಸರ್ಕಾರ ಆಕಾಶವನ್ನು ಕಲ್ಪಿಸಿಕೊಟ್ಟಿದೆ. ಸರ್ವರ್ ದೋಷದ ಕಾರಣದಿಂದಾಗಿ ಅರ್ಜಿ ಸಲ್ಲಿಸಲು ಸಾಧ್ಯವಾಗದಿದ್ದವರು ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸಿಕೊಳ್ಳದಿದ್ದವರು ಇನ್ನು ಬಹಳಷ್ಟು ಜನ ಇದ್ದಾರೆ.
ಹೊಸ ರೇಷನ್ ಕಾರ್ಡ್ ಅರ್ಜಿ ಮತ್ತು ತಿದ್ದುಪಡಿ ಮಾಡಿಸಬಹುದಾ?
ನೀವೇನಾದರೂ ಚಿಕಿತ್ಸೆಗೆ ಸಂಬಂಧಿಸಿದಂತೆ ಹೊಸ ರೇಷನ್ ಕಾರ್ಡ್ ಪಡೆದುಕೊಳ್ಳಬೇಕೆಂದು ಬಯಸಿದರೆ ಸರ್ಕಾರದ ಕಡೆಯಿಂದ ಜುಲೈ 26 ನೇ ತಾರೀಕು ಸಂಜೆ 6 ಗಂಟೆಯಿಂದ 7 ಗಂಟೆಯವರೆಗೆ ಕೇವಲ ಒಂದು ಗಂಟೆಯ ಅವಕಾಶವನ್ನು ಕೊಟ್ಟಿದ್ದು, ಆದರೆ ತುಂಬಾ ಜನರಿಗೆ ಈ ವಿಷಯ ಗೊತ್ತಾಗಿಲ್ಲ ಹಾಗೂ ಮುಂದೆ ಯಾವಾಗ ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಿ ಕೊಡುತ್ತದೆ ಎಂಬ ಮಾಹಿತಿ ಇನ್ನೂ ಕೂಡ ಹೊರಬಂದಿಲ್ಲ.
ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸಬಹುದು!
ಹಾಗಾದರೆ ನೀವೇನಾದರೂ ರೇಷನ್ ಕಾರ್ಡ್ ಸಂಬಂಧಿಸಿದಂತೆ ರೇಷನ್ ಕಾರ್ಡ್ ನಲ್ಲಿ ಯಾವುದೇ ರೀತಿಯ ಬದಲಾವಣೆಗಳನ್ನು ಮಾಡಲು ಬಯಸಿದರೆ ನಿಮಗೆ ಜುಲೈ 6ನೇ ತಾರೀಖಿನಿಂದ ಹಿಡಿದು 31 ನೇ ತಾರೀಖಿನವರೆಗೆ ಅವಕಾಶವನ್ನು ಕಲ್ಪಿಸಿಕೊಟ್ಟಿದೆ. ರೇಷನ್ ಕಾರ್ಡ್ ನಲ್ಲಿ ಯಾವುದೇ ರೀತಿಯ ಬದಲಾವಣೆಗಳನ್ನು ಮಾಡಿಸಿಕೊಳ್ಳಲು ನೀವು 31ನೇ ಕೊನೆಯ ದಿನಾಂಕದವರೆಗೆ ಮಾಡಿಸಲು ಅನುಮತಿ ಇರುತ್ತದೆ.
ರೇಷನ್ ಕಾರ್ಡ್ ತಿದ್ದುಪಡಿ ಇನ್ನು ಎರಡು ದಿನಗಳ ಮಾತ್ರ ಕಾಲಾವಕಾಶವಿರುತ್ತದೆ ಹಾಗಾಗಿ ರೇಷನ್ ಕಾರ್ಡ್ ನಲ್ಲಿ ತಿದ್ದುಪಡಿ ಮಾಡಿಸಲು ಬಯಸುವವರು ಈ ತಿಂಗಳ 31ನೇ ತಾರೀಖಿನ ಒಳಗಾಗಿ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ ಎಂದು ಹೇಳಬಹುದು. ಹಾಗಾಗಿ ಜುಲೈ 31ನೇ ತಾರೀಕು ಬೆಳಿಗ್ಗೆ 10 ಗಂಟೆಯಿಂದ ಸಂಜೆ 7:00ವರೆಗೆ ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸಲು ನಿಮಗೆ ಅವಕಾಶವನ್ನು ಕೊಟ್ಟಿರಲಾಗಿರುತ್ತದೆ.
ಸ್ನೇಹಿತರೆ ನಿಮ್ಮ ಹತ್ತಿರದ ಗ್ರಾಮ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಕೇಂದ್ರಗಳಲ್ಲಿ ಮಾತ್ರ ತಿದ್ದುಪಡಿ ಮಾಡಿಸಲು ಸರ್ಕಾರವು ಅನುಮತಿ ನೀಡಿರುತ್ತದೆ. ಹಾಗಾಗಿ ಯಾವುದೇ ರೀತಿ ಆನ್ಲೈನ್ ಸೆಂಟರ್ ಗಳಲ್ಲಿ ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸಲು ಅವಕಾಶವನ್ನು ಕೊಟ್ಟಿಲ್ಲ. ಮೇಲೆ ನೀಡಿರುವಂತಹ ಸರ್ಕಾರದ ಅನುಮತಿಸಿರುವ ಜಾಗಗಳಿಗೆ ಭೇಟಿ ನೀಡಿ, ನಿಮ್ಮ ರೇಷನ್ ಕಾರ್ಡ್ ತಿದ್ದುಪಡಿಯನ್ನು ಮಾಡಿಸಬಹುದಾಗಿರುತ್ತದೆ.
ರೇಷನ್ ಕಾರ್ಡ್ ತಿದ್ದುಪಡಿಗೆ ಬೇಕಾಗುವ ದಾಖಲೆಗಳು!
- ಆಧಾರ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಮೊಬೈಲ್ ನಂಬರ್
- ಪಾಸ್ ಪೋರ್ಟ್ ಅಳತೆಯ ಭಾವಚಿತ್ರ
- ಜನನ ಪ್ರಮಾಣ ಪತ್ರ (ಆರು ವರ್ಷದ ಒಳಗಿನ ಮಕ್ಕಳು ಇದ್ದಲ್ಲಿ ಮಾತ್ರ).
ಮೇಲೆ ನೀಡಿರುವ ದಾಖಲೆಗಳನ್ನು ತೆಗೆದುಕೊಂಡು ನಿಮ್ಮ ಹತ್ತಿರದ ಗ್ರಾಮ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ನೀವು ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸಬಹುದಾಗಿರುತ್ತದೆ. ರೇಷನ್ ಕಾರ್ಡ್ ತಿದ್ದುಪಡಿಗಳಿಗೆ ಇನ್ನು ಕೇವಲ ಎರಡು ದಿನಗಳು ಮಾತ್ರ ಅವಕಾಶವನ್ನು ಕೊಟ್ಟಿದ್ದು ಇದನ್ನು ಸದುಪಯೋಗಪಡಿಸಿಕೊಳ್ಳಿ ಎಂದು ಹೇಳಲು ಬಯಸುತ್ತೇನೆ.