Panchayat Raj Recruitment: ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನದ ಮೂಲಕ ಕರ್ನಾಟಕದಲ್ಲಿರುವ ಸಮಸ್ತ ಜನತೆಗೆ ಮತ್ತು ಉದ್ಯೋಗ ಹುಡುಕುತ್ತಿರುವ ಎಲ್ಲಾ ಉದ್ಯೋಗ ಆಕಾಂಕ್ಷಿಗಳಿಗೆ ಒಂದು ಒಳ್ಳೆಯ ಸುದ್ದಿ ಅಂತನೇ ಹೇಳಬಹುದು ಯಾಕೆಂದರೆ ಪಂಚಾಯತ್ ರಾಜ್ ಇಲಾಖೆಯಲ್ಲಿ ಸುಮಾರು 51 ಹುದ್ದೆಗಳು ಖಾಲಿ ಇದ್ದು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ತಿಳಿಸಲಾಗಿದೆ.
ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಕುರಿತು ಮಾಹಿತಿ ಇಲ್ಲಿ ಇರುತ್ತದೆ ನೀವು ಲೇಖನವನ್ನು ಕೊನೆಯವರೆಗೂ ಓದಿ ನಿಮಗೆ ಪಂಚಾಯತ್ ರಾಜ್ ಇಲಾಖೆಯಲ್ಲಿ ಕಾರ್ಯನಿರ್ವಹಿಸಲು ಇಷ್ಟವಿದ್ದಲ್ಲಿ ನೀವು ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.
ಕಲ್ಯಾಣ ಕರ್ನಾಟಕ ವ್ಯಾಪ್ತಿಯಲ್ಲಿ ಬರುವ ಜಿಲ್ಲೆಗಳಲ್ಲಿ ಪಂಚಾಯತ್ ರಾಜ್ ಇಲಾಖೆಯಲ್ಲಿ ಹೊಸದಾಗಿ ನೇಮಕಾತಿಯ ಅಧಿಸೂಚನೆಯನ್ನು ಇದೀಗ ಹೊರಡಿಸಲಾಗಿದೆ. ಆಸಕ್ತ ಮತ್ತು ಅರ್ಹತೆ ಇರುವ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿ ನೀವು ಅರ್ಹರಾಗಿದ್ದಲ್ಲಿ ನಿಮಗೆ ಹುದ್ದೆಗೆ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ.
ಖಾಲಿ ಇರುವ ಹುದ್ದೆಗಳ ವಿವರ:
- ಇಲಾಖೆ ಹೆಸರು – ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ.
- ಒಟ್ಟು ಖಾಲಿ ಹುದ್ದೆಗಳು – 51 ಖಾಲಿ ಹುದ್ದೆಗಳು
- ಅರ್ಜಿ ಸಲ್ಲಿಸುವ ವಿಧಾನ – Online
ವಿದ್ಯಾರ್ಹತೆ ಏನಿರಬೇಕು?
ಮಾನ್ಯತೆ ಪಡೆದಿರುವ ಯಾವುದೇ ಒಂದು ವಿಶ್ವವಿದ್ಯಾಲಯದಿಂದ ಪದವಿ ಅಥವಾ ಸ್ನಾತಕೋತ್ತರ ಪದವಿಯನ್ನು ಪಡೆದಿರಬೇಕು. ಕನ್ನಡ ಭಾಷೆ ಜ್ಞಾನ ಕಡ್ಡಾಯವಾಗಿ ಗೊತ್ತಿರಬೇಕು.
ವಯೋಮಿತಿ:
ಪಂಚಾಯತ್ ರಾಜ್ ಇಲಾಖೆಯು ಹೊರಡಿಸಿರುವ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಗರಿಷ್ಠ 35 ವರ್ಷ ಮೀರಿರಬಾರದು.
ಸಂಬಳ ಎಷ್ಟಿರುತ್ತದೆ?
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಹೊರಡಿಸಿರುವ ಅಧಿಸೂಚನೆಯ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗೆ ಪ್ರತಿ ತಿಂಗಳು ₹61,500 ವೇತನ ಇರುತ್ತದೆ.
ಅರ್ಜಿ ಶುಲ್ಕ ಇರುವುದಿಲ್ಲ.
ಆಯ್ಕೆ ವಿಧಾನ ಹೇಗೆ ಇರುತ್ತೆ?
ಫೆಲೋಗಳನ್ನು ಅರ್ಹತೆಗಳ ಆಧಾರದ ಮೇಲೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ನೇಮಕಾತಿಯನ್ನು ಮಾಡಿಕೊಳ್ಳಲಾಗುತ್ತದೆ.
- ಅರ್ಜಿ ಸಲ್ಲಿಕೆ ಆರಂಭದ ದಿನಾಂಕ – 22/01/2024
- ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ – 05/02/2024
ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್:
Notification: