Post Office Jobs: ನಮಸ್ಕಾರ ಎಲ್ಲರಿಗೂ ಈ ಲೇಖನ ಮೂಲಕ ಕರ್ನಾಟಕದ ಸಮಸ್ತ ಜನತೆಗೆ ತಿಳಿಸುವ ವಿಷಯವೇನೆಂದರೆ, ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಪರೀಕ್ಷೆ ಇಲ್ಲದೆ ನೇರ ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ಆಸಕ್ತಿ ಮತ್ತು ಅರ್ಹತೆಗಳ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಇದರ ಬಗ್ಗೆ ಸಂಪೂರ್ಣವಾದ ಮಾಹಿತಿ ತಿಳಿಸಿ ಕೊಟ್ಟಿರುತ್ತೇನೆ. ಲೇಖನವನ್ನು ಕೊನೆಯವರೆಗೂ ಓದಿ.
ಭಾರತೀಯ ಅಂಚೆ ಇಲಾಖೆ ನೇಮಕಾತಿ 2024 {Post Office Jobs}
ಭಾರತೀಯ ಅಂಚೆ ಇಲಾಖೆಯ ಹೊರಡಿಸಿರುವ ದೇಶದ ಪ್ರಕಾರ ಸುಮಾರು 19 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ನಂತರ ಯಾವುದೇ ರೀತಿಯಲ್ಲಿ ಲಿಖಿತ ಪರೀಕ್ಷೆ ಇರುವುದಿಲ್ಲ ಬದಲಿಗೆ ಯಾವ ರೀತಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ ಎಂಬುದನ್ನು ತಿಳಿದುಕೊಳ್ಳಿ.
Post Office Jobs ಶೈಕ್ಷಣಿಕ ಅರ್ಹತೆಗಳೇನು?
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಯು 10ನೇ ತರಗತಿ ಪಾಸ್ ಆಗಿದ್ದರೆ ಸಾಕು ಅರ್ಜಿ ಸಲ್ಲಿಸಬಹುದು.
ವಯೋಮಿತಿ ಎಷ್ಟಿರಬೇಕು?
ಅಂಚೆ ಇಲಾಖೆ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಮೇಲ್ಪಟ್ಟಿರಬೇಕು & ಗರಿಷ್ಠ 66 ವರ್ಷ ಮೀರಿರಬಾರದು ಎಂದು ತಿಳಿಸಲಾಗಿದೆ. ಎಂದು ಅಂಚೆ ಇಲಾಖೆಯ ಹೊರಡಿಸಿರುವ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ವೇತನ ಎಷ್ಟಿದೆ?
ಅಂಚೆ ಇಲಾಖೆಯ ಹೊರಡಿಸಿರುವ ಅಧಿಸೂಚನೆಯ ಪ್ರಕಾರ ಈ ಹುದ್ದೆಗಳಿಗೆ ನೇಮಕಗೊಂಡ ಅಭ್ಯರ್ಥಿಗಳಿಗೆ ತಿಂಗಳಿಗೆ ಸುಮಾರು 19,900 ರಿಂದ 63,200 ರವರೆಗೆ ವೇತನವನ್ನು ನೀಡಲಾಗುತ್ತದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿರುತ್ತದೆ.
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು
- ಆಧಾರ್ ಕಾರ್ಡ್
- 10ನೇ ತರಗತಿ ಅಂಕಪಟ್ಟಿ
- ಕ್ಯಾಟಗರಿ ಸರ್ಟಿಫಿಕೇಟ್
- ಕ್ವಾಲಿಫಿಕೇಷನ್ ಸರ್ಟಿಫಿಕೇಟ್
- ಪಾಸ್ ಪೋರ್ಟ್ ಅಳತೆಯ ಭಾವಚಿತ್ರ
ಈ ಮೇಲಿರುವ ಎಲ್ಲಾ ದಾಖಲೆಗಳನ್ನು ಸರಿಪಡಿಸಿಕೊಂಡು ನೀವು ಪೋಸ್ಟ್ ಆಫೀಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಇನ್ನಷ್ಟು ವಿವರವನ್ನು ಈ ಕೆಳಗೆ ನೀಡಿರುತ್ತೇನೆ ನೋಡಿ.
ಅರ್ಜಿ ಸಲ್ಲಿಸುವುದು ಹೇಗೆ?
- ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಈ ಕೆಳಗಿನ ಮಾರ್ಗಗಳನ್ನು ನೀವು ಅನುಸರಿಸಬೇಕಾಗುತ್ತದೆ.
- ಮೊದಲನೇದಾಗಿ ನೀವು ನೀಡಿರುವ ಜಾಲತಾಣದ ಲಿಂಕನ್ನು ಬಳಸಿಕೊಂಡು ಅಧಿಸೂಚನೆಯನ್ನು ತೆಗೆದುಕೊಂಡು ಓದಿರಿ.
- ನಂತರ ಅದರಲ್ಲಿರುವ ಅರ್ಜಿಯ ನಮೂನೆಯನ್ನು ತೆಗೆದುಕೊಂಡು ಸಂಪೂರ್ಣವಾಗಿ ಭರ್ತಿ ಮಾಡಿರಿ.
- ಅದರ ಜೊತೆಗೆ ಕೇಳಲಾದ ಪ್ರಮುಖ ದಾಖಲೆಗಳನ್ನು ಅದಕ್ಕೆ ಅಟ್ಯಾಚ್ ಮಾಡಿಕೊಳ್ಳಿ.
- ಕೆಳಗೆ ನೀಡಿರುವ ವಿಳಾಸಕ್ಕೆ ನೀವು ಅರ್ಜಿ ಸಲ್ಲಿಸಿರುವ ನಮೂನೆ ಮತ್ತು ನಿಮ್ಮ ದಾಖಲೆಗಳನ್ನು ಕೊನೆಯ ದಿನಾಂಕದೊಳಗೆ ಪೋಸ್ಟ್ ಮುಖಾಂತರ ಕಳುಹಿಸಬಹುದು.
ಅರ್ಜಿ ಸಲ್ಲಿಸುವ ಜಾಲತಾಣ
ಅರ್ಜಿ ಸಲ್ಲಿಸುವ ವಿಳಾಸ:
ಚೀಫ್ ಪೋಸ್ಟ್ ಮಾಸ್ಟರ್ ಜನರಲ್,
ಬಿಹಾರ್ ಸರ್ಕಲ್,ಪಾಟ್ನಾ-800001
ಪ್ರಮುಖ ದಿನಾಂಕಗಳು
- ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ – 16/04/2024
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 31/05/2024
ಮೇಲೆ ನೀಡಿರುವ ಹಾಗೆ ಎಲ್ಲ ವಿಧಾನಗಳನ್ನು ನೀವು ಗಮನದಿಂದ ಓದಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.