Pradhan mantri awas yojane 2023: ನಮಸ್ಕಾರ ಸ್ನೇಹಿತರೆ, ಈ ಲೇಖನದ ಮೂಲಕ ತಮಗೆ ತಿಳಿಸುವುದೇನೆಂದರೆ ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಂದರೆ ಪ್ರಧಾನ ಮಂತ್ರಿಗಳಿಂದ ಮನೆಗಳಿಲ್ಲದವರು ಮನೆಗಳನ್ನು ಕಟ್ಟಿಕೊಳ್ಳಲು ಒಂದುವರೆ ಲಕ್ಷದವರೆಗೆ ಸಹಾಯಧನವನ್ನು ನೀಡಲಾಗುವುದು ಇದರ ಬಗ್ಗೆ ಸಂಪೂರ್ಣವಾದ ಮಾಹಿತಿ ಮತ್ತು ಈ ಯೋಜನೆಗೆ ಹೇಗೆ ಅರ್ಜಿ ಸಲ್ಲಿಸಬೇಕು ಎಂಬುದು ಈ ಕೆಳಗೆ ನೀಡಿರುತ್ತೇನೆ. ಆದ ಕಾರಣ ಲೇಖನವನ್ನು ಕೊನೆಯವರೆಗೂ ಓದಿ.
ಸ್ನೇಹಿತರೆ ಈ ಯೋಜನೆಯು ಬಡವರಿಗಾಗಿ ಅಥವಾ ಗ್ರಾಮೀಣ ಪ್ರದೇಶದಲ್ಲಿ ವಾಸಿಸುವವರಿಗೆ ಸ್ವಂತ ಮನೆ ಇರುವುದಿಲ್ಲ ಆದ ಕಾರಣ ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಬಡವರಿಗೆ ಮತ್ತು ಸ್ವಂತ ಮನೆ ಇಲ್ಲದವರಿಗೆ ಗ್ರಾಮೀಣ ಪ್ರದೇಶದಲ್ಲಿ ಮುಖ್ಯವಾಗಿ ವಾಸ ಮಾಡುತ್ತಿರುತ್ತಾರೆ ಅಂತವರಿಗೆ ಮನೆ ಕಟ್ಟಿಕೊಳ್ಳಲು ಒಂದು ಪಾಯಿಂಟ್ ಐದು ಲಕ್ಷದವರೆಗೆ ಸಹಾಯಧನವನ್ನು ನೀಡಲಾಗುತ್ತದೆ.
ಈ ಯೋಜನೆ ಅಡಿಯಲ್ಲಿ ಸರ್ಕಾರದಿಂದ ಹೆಚ್ಚಿನ ಪ್ರಯೋಜನಗಳನ್ನು ಪಡೆದುಕೊಂಡು ಸ್ವಂತ ಸೂರನ್ನು ಕಟ್ಟಿಕೊಳ್ಳಲು ನೆರವಾಗುತ್ತದೆ.
ಈ ಯೋಜನೆಯ ಹೆಸರು ಪ್ರಧಾನಮಂತ್ರಿಯ ಆವಾಸ ಯೋಜನೆ ಈ ಹಿಂದೆ 2016ರಲ್ಲಿ ಈ ಯೋಜನೆಗೆ ಇಂದಿರಾಗಾಂಧಿ ಆವಾಸ್ ಯೋಜನೆ ಎಂದು ಹೆಸರಿತ್ತು ತದನಂತರದಲ್ಲಿ ಭಾರತದ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿಯವರು ಪ್ರಧಾನ ಮಂತ್ರಿ ಆವಾಸ್ ಯೋಜನೆ ಎಂದು ಮರುನಾಮಕರಣ ಮಾಡಿದರು.
ಈ ಹಿಂದೆ ಈ ಯೋಜನೆಯಲ್ಲಿ ಎರಡು ಪಾಯಿಂಟ್ 6 ಕೋಟಿ ಮನೆಗಳನ್ನು ಜಾರಿಗೆಗೊಳಿಸಲಾಗಿತ್ತು ಇದೀಗ 2.5 ಕೋಟಿ ಮನೆಗಳು ಈಗಾಗಲೇ ಇನ್ನು ಉಳಿದ ಮನೆಗಳು ಮಾರ್ಚ್ನ ಒಳಗಡೆ ಸ್ಯಾಂಕ್ಷನ್ ಆಗಲಿವೆ ಆದಕಾರಣ ನೀವು ಕೂಡ ಅರ್ಜಿ ಸಲ್ಲಿಸಿ ಮನೆಯನ್ನು ಪಡೆದುಕೊಳ್ಳಬಹುದು.
ಈ ಯೋಜನೆಯ ಉಪಯೋಗವೇನೆಂದರೆ ಗ್ರಾಮೀಣ ಪ್ರದೇಶದಲ್ಲಿ ಮನೆ ಕಟ್ಟಿಕೊಳ್ಳಲು ಒಂದು ಪಾಯಿಂಟ್ ಎರಡು ಲಕ್ಷ ಸಹಾಯಧನವನ್ನು ನೀಡಲಾಗುತ್ತದೆ ಮತ್ತು ಗುಡ್ಡಗಾಡು ಪ್ರದೇಶದಲ್ಲಿ ಮನೆಗಳನ್ನು ಕಟ್ಟಿಕೊಡಲು 1.3 ಲಕ್ಷ ಹಣವನ್ನು ನೀಡಲಾಗುತ್ತದೆ. ಇದನ್ನು ಬಳಸಿಕೊಂಡು ಬಡವರು ಮನೆಗಳನ್ನು ಕಟ್ಟಿಕೊಳ್ಳಬೇಕು.
ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ಅರ್ಜಿಯನ್ನು ಸಲ್ಲಿಸಲು ಈ ಕೆಳಗಿನ ಒಂದು ವೆಬ್ಸೈಟನ್ನು ನೀಡಿರುತ್ತೇನೆ ಅದು ಪಿಎಂ ನ ಆವಾಸ್ ಯೋಜನೆಯ ಅಧಿಕೃತ ವೆಬ್ಸೈಟ್ ಆಗಿರುತ್ತದೆ. ಆ ಒಂದು ಜಾಲತಾಣವನ್ನು ತಲುಪುವ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಹಾಗಾದರೆ ಇಲ್ಲಿದೆ ನೋಡಿ ಆ ವೆಬ್ ಸೈಟ್ ಲಿಂಕ್.
ಪ್ರಧಾನ ಮಂತ್ರಿ ಆವಾಸ್ ಯೋಜನೆ ಅರ್ಜಿ ಸಲ್ಲಿಸಲು ಈ ವೆಬ್ ಸೈಟಿಗೆ ಭೇಟಿ ನೀಡಿ.
ಈ ಮೇಲೆ ನೀಡಿರುವ ವೆಬ್ ಸೈಟನ್ನು ಬಳಸಿಕೊಂಡು ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ಅರ್ಜಿಯನ್ನು ಸಲ್ಲಿಸಬಹುದು. ಇನ್ನು ನೀವು ಕೂಡ ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸಿಲ್ಲ ಅಂದರೆ ಈ ಮೇಲೆ ಕೊಟ್ಟಿರುವ ಲಿಂಕ್ ಅನ್ನು ಬಳಸಿಕೊಂಡು ಅರ್ಜಿ ಸಲ್ಲಿಸಿ.