Ration Card Correction: ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನದ ಮೂಲಕ ಕರ್ನಾಟಕದ ಸಮಸ್ತ ಜನತೆಗೆ ತಿಳಿಸುವ ವಿಷಯವೇನೆಂದರೆ ಈ ಹಿಂದೆ ರೇಷನ್ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಸಲು ಮತ್ತು ತಿದ್ದುಪಡಿ ಮಾಡಿಸಲು ಏಪ್ರಿಲ್ ಒಂದನೇ ತಾರೀಖಿನಿಂದ ಆರಂಭವಾಗಲಿವೆ ಎಂದು ತಿಳಿಸಲಾಗಿತ್ತು. ಅದರ ಪ್ರಕಾರವೇ ನಾಳೆ ರೇಷನ್ ಕಾರ್ಡ್ ಗೆ ತಿದ್ದುಪಡಿ ಮಾಡಲು ಅಥವಾ ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಲು ಅವಕಾಶವನ್ನು ಕಲ್ಪಿಸಿಕೊಡಲಾಗುತ್ತದೆ ಎಂದು ತಿಳಿಸಲಾಗಿದೆ.
ಹಾಗಾದರೆ ನೀವು ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸಲು ಹಾಗೂ ಹೊಸ ರೇಷನ್ ಕಾರ್ಡ್ಗಳಿಗೆ ಅರ್ಜಿ ಸಲ್ಲಿಸಲು ಎಲ್ಲಿ ಹೋಗಬೇಕು ಮತ್ತು ಯಾವ ರೀತಿ ಅರ್ಜಿ ಸಲ್ಲಿಸಬೇಕು ಯಾವ ರೀತಿಯಾಗಿರುತ್ತದೆ ಎಂಬ ಸಂಪೂರ್ಣ ಮಾಹಿತಿ ಲೇಖನವನ್ನು ಕೊನೆಯವರೆಗೂ ಓದಿ ಇಂತಹ ಸುದ್ದಿಗಳಿಗಾಗಿ ನಮ್ಮ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಿ.
ಈ ಹಿಂದೆ ತಿಳಿಸಿರುವಂತೆ ಸುಮಾರು 2.96 ಲಕ್ಷ ರೇಷನ್ ಕಾರ್ಡ್ ಗಳನ್ನು ವಿಲೇವಾರಿ ಕಾರ್ಯಕ್ರಮ ಮುಗಿಸುತ್ತೇವೆ ನಂತರ ಏಪ್ರಿಲ್ ಒಂದನೇ ತಾರೀಖಿನಿಂದ ಹೊಸ ರೇಷನ್ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಸಲು ಅವಕಾಶಗಳನ್ನು ಕಲ್ಪಿಸಿಕೊಡಲಾಗುತ್ತದೆ ಎಂದು ತಿಳಿಸಲಾಗಿತ್ತು. ಅದರ ಪ್ರಕಾರವೇ ಏಪ್ರಿಲ್ ಒಂದನೇ ತಾರೀಕು ಅಂದರೆ ನಾಳೆ ಹೊಸ ರೇಷನ್ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಸಲು ಮತ್ತು ತಿದ್ದುಪಡಿ ಮಾಡಿಸಲು ಅವಕಾಶ ಕಲ್ಪಿಸಿಕೊಡಲಾಗುವುದು ಎಂಬ ಮಾಹಿತಿ ಇದೆ.
ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸಲು ಎಲ್ಲಿ ಹೋಗಬೇಕು?
ನೀವು ಹೊಸ ರೇಷನ್ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಸುತ್ತಿದ್ದೇನೆ ಅಥವಾ ರೇಷನ್ ಕಾರ್ಡ್ ಗಳನ್ನು ತಿದ್ದುಪಡಿ ಮಾಡಲು ಬಯಸುತಿದ್ದೀರಾ? ನೀವು ಮಾಡಬೇಕಾದದ್ದು ಇಷ್ಟೇ, ನಿಮ್ಮ ಹತ್ತಿರದ ಗ್ರಾಮವನ್ ಕೇಂದ್ರ ಅಥವಾ ಕರ್ನಾಟಕವನ್ನು ಕೇಂದ್ರ ಈ ರೀತಿ ಸಿಎಸ್‌ಸಿ ಕೇಂದ್ರ ದಂತಹ ಆನ್ಲೈನ್ ಸೆಂಟರ್ ಗಳಿಗೆ ತೆರಳಿ ನೀವು ನಿಮ್ಮ ರೇಷನ್ ಕಾರ್ಡ್ ನಲ್ಲಿ ತಿದ್ದುಪಡಿ ಅಥವಾ ಹೊಸ ರೇಷನ್ ಕಾರ್ಡ್ ಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.
ಇದಕ್ಕೆ ಬೇಕಾಗುವ ಪ್ರಮುಖ ದಾಖಲೆಗಳೆಂದರೆ ಆಧಾರ್ ಕಾರ್ಡ್ ಆಧಾರ್ ಕಾರ್ಡಿಗೆ ಮೊಬೈಲ್ ಲಿಂಕ್ ಆಗಿರಬೇಕು ಹಾಗೂ ತಿದ್ದುಪಡಿ ಮಾಡಿಸುವ ಅವರಿದ್ದರೆ ಹಳೆಯ ರೇಷನ್ ಕಾರ್ಡ್ ಸಂಖ್ಯೆ ಬೇಕಾಗುತ್ತದೆ ಮತ್ತು ಹೊಸ ರೇಷನ್ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಸುವವರ ಆಧಾರ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ ನೊಂದಿಗೆ ಮೊಬೈಲ್ ನಂಬರ್ ಲಿಂಕ್ ಇದ್ದರೆ ಸಾಕು. ಅರ್ಜಿ ಸಲ್ಲಿಸಬಹುದು ಮತ್ತು ಜಾತಿ ಹಾಗೂ ಆದಾಯ ಪ್ರಮಾಣ ಪತ್ರ ಕೊಡಬೇಕಾಗುತ್ತದೆ.
ಈ ಎಲ್ಲ ಮಾಹಿತಿ ನಿಮಗೆ ಇಷ್ಟವಾದಲ್ಲಿ ನೀವು ಈ ಲೇಖನವನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ ಅಥವಾ ಯಾರಿಗೆ ರೇಷನ್ ಕಾರ್ಡ್ ತಿದ್ದುಪಡಿ ಹಾಗೂ ಹೊಸ ರೇಷನ್ ಕಾರ್ಡ್ ಗಳ ಅರ್ಜಿ ಸಲ್ಲಿಸುವುದು ಅವಶ್ಯಕತೆ ಅವರಿಗೆ ಸಹಾಯಕಾರಿಯಾಗಿ.