Ration Card: ನಮಸ್ಕಾರ ಸ್ನೇಹಿತರೆ, ಈ ಲೇಖನದ ಮೂಲಕ ಕರ್ನಾಟಕದ ಸಮಸ್ತ ಜನತೆಗೆ ತಿಳಿಸುವ ಪ್ರಮುಖವಾದ ವಿಷಯವೇನೆಂದರೆ, ನಿಮಗೆಲ್ಲ ತಿಳಿದಿರುವ ಹಾಗೆ ರೇಷನ್ ಕಾರ್ಡ್ ಒಂದು ಸರ್ಕಾರದ ದಾಖಲೆಯಾಗಿದ್ದು, ರಾಜ್ಯ ಹಾಗೂ ಕೇಂದ್ರ ಸರ್ಕಾರದ ಯೋಜನೆಗಳ ಲಾಭವನ್ನು ಪಡೆದುಕೊಳ್ಳಲು ಹಾಗೂ ಅವುಗಳಿಗೆ ಅರ್ಜಿ ಸಲ್ಲಿಸಲು ರೇಷನ್ ಕಾರ್ಡ್ ಒಂದು ಪ್ರಮುಖವಾದ ದಾಖಲೆಯಾಗಿರುತ್ತದೆ. ಹಾಗಾಗಿ ರೇಷನ್ ಕಾರ್ಡ್ ನ ಬಗ್ಗೆ ಇರುವ ಒಂದು ಪ್ರಮುಖವಾದ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸಲಾಗಿರುತ್ತದೆ. ಲೇಖನವನ್ನು ಕೊನೆಯವರೆಗೂ ಓದಿ, ಸಂಪೂರ್ಣವಾದ ಮಾಹಿತಿ ದೊರಕುತ್ತದೆ.
ರೇಷನ್ ಕಾರ್ಡ್ {Ration Card}
ಸ್ನೇಹಿತರೆ, ಸದ್ಯಕ್ಕೆ ಈಗ ರಾಜಸ್ಥಾನ್ ರಾಜ್ಯದಲ್ಲಿ ಜನರಿಗೆ ಪಡಿತರ ಚೀಟಿಯ ಮೂಲಕ ಅಕ್ಕಿ ಗೋಧಿ ಎಣ್ಣೆ ಹಾಗೂ ಇನ್ನಿತರ ವಸ್ತುಗಳನ್ನು ಉಚಿತವಾಗಿ ನೀಡಲಾಗುತ್ತಿದೆ. ಭಾರತದ ಪ್ರಧಾನ ಮಂತ್ರಿಗಳಾದಂತಹ ನರೇಂದ್ರ ಮೋದಿಯವರು ಇನ್ನಿತರ 9 ಧಾನ್ಯಗಳನ್ನು ದೇಶದ ಎಲ್ಲಾ ರಾಜ್ಯಗಳಿಗೆ ದೊರಕುವಂತೆ ಮಾಡಲಿದ್ದಾರೆ. ರೇಷನ್ ಕಾರ್ಡ್ ಹೊಂದಿರುವ ಫಲಾನುಭವಿಗಳಿಗೆ ಒಂಬತ್ತು ವಸ್ತುಗಳನ್ನು ಉಚಿತವಾಗಿ ನೀಡಲಾಗುವುದು ಎಂದು ತಿಳಿಸಲಾಗಿದೆ.
ರೇಷನ್ ಕಾರ್ಡ್ ಹೊಂದಬೇಕಾದರೆ ನಿಮಗಿರಬೇಕಾದ ಅರ್ಹತೆ!
- ಭಾರತದ ಪ್ರಜೆಯಾಗಿದ್ದವರಿಗೆ ಮಾತ್ರ ರೇಷನ್ ಕಾರ್ಡ್ ಹೊಂದಲು ಅನುಮತಿ ಇದೆ.
- ಬಡತನ ರೇಖೆಗಿಂತ ಕೆಳಗುಳಿದವರು ಮಾತ್ರ ಈ ಯೋಜನೆಗೆ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
- ಒಂದು ಕುಟುಂಬದ ಎಲ್ಲಾ ಸದಸ್ಯರು ರೇಷನ್ ಕಾರ್ಡ್ ನಲ್ಲಿ ಹೆಸರು ನೋಂದಾಯಿಸಿಕೊಳ್ಳಬೇಕು ಎಂದು ತಿಳಿಸಲಾಗಿದೆ.
- ಒಂದು ಕುಟುಂಬದ ಎಲ್ಲ ಸದಸ್ಯರು ಪ್ರಮುಖವಾಗಿ ಆಧಾರ್ ಕಾರ್ಡ್ ಅನ್ನು ಹೊಂದಿರಬೇಕಾಗಿದೆ.
ರೇಷನ್ ಕಾರ್ಡಿಗೆ ಬೇಕಾಗುವ ದಾಖಲೆಗಳೇನು?
- ಆಧಾರ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಪಾಸ್ ಪೋರ್ಟ್ ಅಳತೆಯ ಭಾವಚಿತ್ರ
- ನಿವಾಸದ ಪ್ರಮಾಣ ಪತ್ರ
- ಚಾಲ್ತಿಯಲ್ಲಿರುವ ಮೊಬೈಲ್ ನಂಬರ್
- ಮೊಬೈಲ್ ನಂಬರ್ ಆಧಾರ್ ಕಾರ್ಡ್ ನೊಂದಿಗೆ ಕಡ್ಡಾಯವಾಗಿ ಲಿಂಕ್ ಆಗಿರಬೇಕು.
ಸ್ನೇಹಿತರೆ, ಕೆಳಗೆ ನೀಡಿರುವ ಜಾಲತಾಣವನ್ನು ಬಳಸಿಕೊಂಡು https://nfsa.gov.in/ ನೀವು ನಿಮ್ಮ ರೇಷನ್ ಕಾರ್ಡನ್ನು ಕೂಡ ಆಯ್ಕೆ ಮಾಡಿಕೊಂಡು ಹಾಗೂ ನಿಮ್ಮ ಸಂಪೂರ್ಣ ವಿವರಗಳನ್ನು ಅಲ್ಲಿ ಭರ್ತಿ ಮಾಡುವ ಮೂಲಕ ನಿಮ್ಮ ಸ್ಥಳದಲ್ಲಿ ಈ ಯೋಜನೆಯ ಲಾಭ ಯಾರಿಗೆ ಸಿಗಲಿದೆ ಎಂದು ತಿಳಿದುಕೊಳ್ಳಬಹುದು.
ಸ್ನೇಹಿತರೆ, ಈ ಯೋಜನೆಯ ಮೂಲಕ ಬಡತನ ರೇಖೆಗಿಂತ ಕೆಳಗಿಳಿದಿರುವ ಜನರಿಗೆ ಯಾವುದೇ ರೀತಿಯ ಆಹಾರದ ಕೊರತೆ ಆಗದಂತೆ ನೋಡಿಕೊಳ್ಳಲಾಗುವ ಉದ್ದೇಶದಿಂದ ಈ ಯೋಜನೆಯನ್ನು ಜಾರಿಗೆ ಬಳಸಲಾಗಿದೆ ಎಂದು ಹೇಳಬಹುದು. ಯಾರು ಆ ಪಟ್ಟಿಯಲ್ಲಿ ನಿಮ್ಮ ಹೆಸರು ಇಲ್ಲ ಎಂದು ನೋಡಿಕೊಂಡು ತಕ್ಷಣವೇ ನೀವು ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಹಾಗೂ ಈ ಯೋಜನೆಯ ಸದುಪಯೋಗಪಡಿಸಿಕೊಳ್ಳಿ.