VAO Job Recruitments: ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನದ ಮೂಲಕ ಕರ್ನಾಟಕದ ಸಮಸ್ತ ಜನತೆಗೆ ತಿಳಿಸುವ ವಿಷಯವೇನೆಂದರೆ ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದ್ದು ಇನ್ನೇನು ಕೆಲವೇ ದಿನಗಳಲ್ಲಿ ಕೊನೆಯ ದಿನಾಂಕ ಮುಕ್ತಾಯವಾಗುತ್ತದೆ. ಅಲ್ಲಿಯವರೆಗೆ ಆಸಕ್ತಿ ಮತ್ತು ಅರ್ಹತೆಗಳ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಇದರ ಬಗ್ಗೆ ಸಂಪೂರ್ಣವಾದ ಮಾಹಿತಿ ಈ ಕೆಳಗೆ ನಿದಿರುತ್ತೇನೆ ನೋಡಿ.
ನೀವು ಕೂಡ ದಿನ ನಿತ್ಯವು ಇದೇ ರೀತಿಯ ಹೆಚ್ಚಿನ ಸುದ್ದಿಗಳನ್ನು ದಿನನಿತ್ಯ ಓದಲು ಇಷ್ಟಪಡುತ್ತಿದ್ದರೆ ನಮ್ಮ ವಾಟ್ಸಪ್ ಗ್ರೂಪ್ ಗೆ ಇಂದೇ ಜಾಯಿನ್ ಆಗಿ. ಅಲ್ಲಿ ಇದೇ ತರಹದ ಮಾಹಿತಿಗಳು ದಿನನಿತ್ಯವು ದೊರಕುತ್ತವೆ. ಹಾಗೂ ಉದ್ಯೋಗ ಸಂಬಂಧಿತ ಮಾಹಿತಿಗಳು ಮತ್ತು ಕರ್ನಾಟಕ ಸರ್ಕಾರದ ಯೋಜನೆಗಳ ಬಗ್ಗೆ ಮಾಹಿತಿಗಳು ಕೂಡ ದಿನನಿತ್ಯ ಉಚಿತವಾಗಿ ದೊರಕುತ್ತವೆ.
ಎಷ್ಟು ಹುದ್ದೆಗಳು ಖಾಲಿ ಇವೆ?
ಕರ್ನಾಟಕದಲ್ಲಿ ಒಟ್ಟು ಎಲ್ಲಾ ಸೇರಿ ಒಂದು ಸಾವಿರ ಹುದ್ದೆಗಳು ಖಾಲಿ ಇದ್ದು ಅರ್ಹತೆ ಮತ್ತು ಆಸಕ್ತಿ ಇವಳ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಕರ್ನಾಟಕದಲ್ಲಿರುವ ಎಲ್ಲಾ ಜಿಲ್ಲೆಗಳಲ್ಲಿ ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳು ಖಾಲಿ ಇದ್ದು ಅರ್ಜಿ ಸಲ್ಲಿಸಲು ಆಹ್ವಾನಿಸಲಾಗಿದೆ.
ವಿದ್ಯಾರ್ಹತೆ ಏನಿರಬೇಕು?
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಯು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಿಂದ ದ್ವಿತೀಯ ಪಿಯುಸಿ, ಡಿಪ್ಲೋಮಾ, ಐಟಿಐ ಪಾಸ್ ಆಗಿರಬೇಕು ಎಂದು ತಿಳಿಸಲಾಗಿದೆ.
ವಯೋಮಿತಿ ಎಷ್ಟಿರಬೇಕು?
ಕರ್ನಾಟಕ ಕಂದಾಯ ಇಲಾಖೆಯ ಹೊರಡಿಸಿರುವ ಅಧಿಸೂಚನೆಯ ಪ್ರಕಾರ ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಯ ವಯಸ್ಸು 18 ವರ್ಷಕ್ಕಿಂತ ಮೇಲ್ಪಟ್ಟಿರಬೇಕು ಮತ್ತು 35 ವರ್ಷಗಳು ದಾಟಿರಬಾರದು ಎಂದು ತಿಳಿಸಲಾಗಿದೆ.
ಅರ್ಜಿ ಶುಲ್ಕ ಎಷ್ಟಿರುತ್ತದೆ?
- 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು ₹750/- ರೂಪಾಯಿಗಳು
- ಎಸ್.ಸಿ/ಎಸ್.ಟಿ ಅಭ್ಯರ್ಥಿಗಳು ₹500/- ರೂಪಾಯಿಗಳು
ಆಯ್ಕೆ ಪ್ರಕ್ರಿಯೆ ಹೇಗಿರುತ್ತದೆ?
ಕಂದಾಯ ಇಲಾಖೆಯು ಹೊರಡಿಸಿರುವ ಅಧಿಸೂಚನೆಯ ಪ್ರಕಾರ ನೀವು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ್ದರೆ ನಿಮ್ಮ ಆಯ್ಕೆಯ ಪ್ರಕ್ರಿಯೆಯು – ಮೊದಲು ನಿಮಗೆ ಲಿಖಿತ ಪರೀಕ್ಷೆಯನ್ನು ನಡೆಸಿ ನಂತರದಲ್ಲಿ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಎಂದು ತಿಳಿಸಲಾಗಿದೆ.
ಅರ್ಜಿ ಸಲ್ಲಿಸುವುದು ಹೇಗೆ?
ಅರ್ಜಿ ಸಲ್ಲಿಸುವುದು ತುಂಬಾ ಸುಲಭವಾಗಿದೆ. ಈ ಕೆಳಗಿನ ಬಳಸಿಕೊಂಡು ನೀವು ನಿಮ್ಮ ಎಲ್ಲಾ ದಾಖಲಾತಿಗಳನ್ನು ಸರಿಯಾಗಿ ನೀಡುವ ಮೂಲಕ ಮತ್ತು ಅರ್ಜಿ ಶುಲ್ಕ ತುಂಬುವ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅಥವಾ ನಿಮ್ಮ ಹತ್ತಿರದ ಸೈಬರ್ ಸೆಂಟರ್ ಅಥವಾ ಆನ್ಲೈನ್ ಸೆಂಟರ್ ಗಳಿಗೆ ತೆರಳಿ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕನ್ನು ಈ ಕೆಳಗೆ ನೀಡಿರುತ್ತೇನೆ ಅದನ್ನು ಬಳಸಿಕೊಂಡು ನೀವು ಅರ್ಜಿ ಸಲ್ಲಿಸಬಹುದಾಗಿರುತ್ತದೆ.
ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್
https://karnemaka.kar.nic.in/trialrun/home.aspx
ವಿಶೇಷ ಸೂಚನೆ: ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮೇ 15ನೇ ತಾರೀಕು 2024 ಆಗಿರುತ್ತದೆ.